ದೇಶ

ಪಶ್ಚಿಮ ಬಂಗಾಳ: 3ನೇ ಬಾರಿ ಮುಖ್ಯಮಂತ್ರಿಯಾಗಿ ಟಿಎಂಸಿ ಮುಖ್ಯಸ್ಥೆ 'ದೀದಿ' ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

Manjula VN

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಲಾಗಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿಯವರಿಗೆ ರಾಜ್ಯಪಾಲ ಜಗದೀಪ್ ಧನಕರ್ ಅವರು ಪ್ರತಿಜ್ಞಾವಿಧಿ ಭೋಧಿಸಿದರು. 

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. ಆದರೆ ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಿದ್ದಾರೆ. 

ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿಯವರನ್ನು ಹೊರತುಪಡಿಸಿ ಯಾವುದೇ ಸಚಿವರೂ ಪ್ರಮಾಣವಚನ ಸ್ವೀಕಾರ ಮಾಡಿಲ್ಲ. 

SCROLL FOR NEXT