ಅಲಿಗಢ ವಿಶ್ವ ವಿದ್ಯಾಲಯ 
ದೇಶ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಖ್ಯಾತ ಸಂಸ್ಕೃತ ವಿದ್ವಾಂಸ, ಪ್ರೊಫೆಸರ್ ಖಾಲಿದ್ ಬಿನ್ ಯೂಸುಫ್ ನಿಧನ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಖ್ಯಾತ ಸಂಸ್ಕೃತ ವಿದ್ವಾಂಸ, ಪ್ರೊಫೆಸರ್ ಖಾಲಿದ್ ಬಿನ್ ಯೂಸುಫ್ ಅವರು ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಖ್ಯಾತ ಸಂಸ್ಕೃತ ವಿದ್ವಾಂಸ, ಪ್ರೊಫೆಸರ್ ಖಾಲಿದ್ ಬಿನ್ ಯೂಸುಫ್ ಅವರು ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಖಾಲಿದ್ ಬಿನ್ ಯೂಸುಫ್ ಅವರು ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕು ಲಕ್ಷಣ ಮತ್ತು ನ್ಯೂಮೋನಿಯಾ ಸೋಂಕು ಲಕ್ಷಣಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಬಗ್ಗೆ ಅಲಿಗಢ ವಿಶ್ವವಿದ್ಯಾಲಯ ಕೂಡ ಹೇಳಿಕೆ ಬಿಡುಗಡೆ ಮಾಡಿದ್ದು, ಪ್ರೊ.ಯೂಸುಫ್ ಅವರಿಗೆ ಕೋವಿಡ್ ಸೋಂಕು ಲಕ್ಷಣಗಳಿದ್ದವು. ಅಲ್ಲದೆ  ಗಂಭೀರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ. ಅವರು ಕಳೆದ ಕೆಲ ದಿನಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಮಾಹಿತಿ ನೀಡಿದೆ. 

ಪ್ರೊ.ಯೂಸುಫ್ ಅವರು, ಋಗ್ವೇದದಲ್ಲಿ ಡಾಕ್ಟರೇಟ್ ಪಡೆದ ಮೊದಲ ಮುಸ್ಲಿಮರಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇನ್ನು ಪ್ರೊ.ಯೂಸುಫ್ ಅವರಿಗೆ ಎಎಂಯು ಉಪ ಕುಲಪತಿಗಳಾದ ಪ್ರೊ.ತಾರಿಖ್ ಮನ್ಸೂರ್ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

ಇನ್ನು ಅಲಿಘಡ ವಿಶ್ವವಿದ್ಯಾಲಯದಲ್ಲಿ 13 ಮಂದಿ ಕಾರ್ಯನಿರತ ಪ್ರಾಧ್ಯಾಪಕರು ಕೋವಿಡ್ ಸೋಂಕಿಗೆ ತುತ್ತಾಗಿ ನಿಧನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!