ದೇಶ

ಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿ

Nagaraja AB

ಕೊಲ್ಕತ್ತಾ: ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ತಮ್ಮ ಬೆಂಗಾವಲು ವಾಹನದ ಮೇಲಿನ ದಾಳಿ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಿ ಮುರಳೀಧರನ್ ಟ್ವೀಟ್ ಮಾಡಿದ್ದಾರೆ.

ಹಿಂಸಾಚಾರದ ವೇಳೆ ದಾಳಿಗೊಳಗಾಗಿದ್ದ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಪಶ್ಚಿಮ ಮಿಡ್ನಾಪುರಕ್ಕೆ ಹೋಗಿದ್ದೆ. ತಮ್ಮ ಬೆಂಗಾವಿನೊಂದಿಗೆ ಒಂದು ಮನೆಯಿಂದ ಮತ್ತೊಂದು ಮನೆಗೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ಎದುರಾದ ಗುಂಪೊಂದು ನಮ್ಮ
ಮೇಲೆ ಗಲಾಟೆ ಮಾಡಿ, ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಮುರಳೀಧರನ್ ಹೇಳಿದ್ದಾರೆ.

ನಾನು ಸುರಕ್ಷಿತವಾಗಿದ್ದೇನೆ. ಆದರೆ, ಕಾರು ಚಾಲಕನಿಗೆ ಗಾಯವಾಗಿದೆ. ಕೆಲ ಕಾರುಗಳ ಕಿಟಕಿಗಳನ್ನು ಹೊಡೆದು ಹಾಕಲಾಗಿದೆ ಎಂದು ಸಚಿವರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿಯೇ ದಾಳಿ ನಡೆದಿದೆ ಎಂದು ಸಚಿವರ ಜೊತೆಗಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ.ಈ ಘಟನೆ ಸಂಬಂಧ ತನಿಖೆ ನಡೆಸಲಾಗುವುದು.ಆದರೆ, ಈವರೆಗೂ ಯಾರನ್ನೂ ಬಂದಿಸಿಲ್ಲ ಎಂದು ಪಶ್ಚಿಮ 
ಮಿಡ್ನಾಪುರದ ಕೊತ್ವಾಲಿ ಠಾಣಾಧಿಕಾರಿಯೊಬ್ಬರು ಹೇಳಿದ್ದಾರೆ.

SCROLL FOR NEXT