ಪ್ರಮಾಣವಚನ ಸ್ವೀಕರಿಸುತ್ತಿರುವ ರಂಗಸ್ವಾಮಿ 
ದೇಶ

ಪುದುಚೇರಿ ನೂತನ ಮುಖ್ಯಮಂತ್ರಿಯಾಗಿ ಎಐಎನ್‌ಆರ್‌ಸಿ ನಾಯಕ ಎನ್ ರಂಗಸ್ವಾಮಿ ಪ್ರಮಾಣ

ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಎಐಎನ್‌ಆರ್‌ಸಿ ಸ್ಥಾಪಕ ಅಧ್ಯಕ್ಷ ಎನ್ ರಂಗಸ್ವಾಮಿ ಅವರು ಶುಕ್ರವಾರ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪುದುಚೇರಿ: ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಎಐಎನ್‌ಆರ್‌ಸಿ ಸ್ಥಾಪಕ ಅಧ್ಯಕ್ಷ ಎನ್ ರಂಗಸ್ವಾಮಿ ಅವರು ಶುಕ್ರವಾರ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ಎನ್‌ಡಿಎ ಗೆಲುವಿಗೆ ಕಾರಣರಾದ 71 ವರ್ಷದ ಅನುಭವಿ ನಾಯಕ ರಂಗಸ್ವಾಮಿ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸಾಯಿ ಸೌಂದರ್ಯರಾಜನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.


ಕೋವಿಡ್ ನಿರ್ಬಂಧದಿಂದಾಗಿ, ಚುನಾಯಿತ ಶಾಸಕರು, ಪಕ್ಷದ ಹಿರಿಯ ನಾಯಕರು, ಸರ್ಕಾರ ಮುಖ್ಯ ಕಾರ್ಯದರ್ಶಿ ಅಶ್ವನಿ ಕುಮಾರ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

ಪುದುಚೇರಿಯಲ್ಲಿ ರಂಗಸ್ವಾಮಿ ನೇತೃತ್ವದಲ್ಲಿ ಮೊದಲ ಬಾರಿಗೆ ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್(ಎಐಎನ್‌ಆರ್‌ಸಿ) ಹಾಗೂ ಬಿಜೆಪಿ ಮೈತ್ರಿಕೂಟದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಮುಂದಿನ ವಾರ ಎರಡು ಪಕ್ಷಗಳು ಪರಸ್ಪರ ನಿರ್ಧಾರ ಕೈಗೊಂಡ ನಂತರ ಎಐಎನ್‌ಆರ್‌ಸಿ ಮತ್ತು ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!