ದೇಶ

ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಸ್ಪಷ್ಟನೆ

Nagaraja AB

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ ವರದಿಯಾಗಿತ್ತು. ಇಂತಹ ವರದಿಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಏಮ್ಸ್ ಆಸ್ಪತ್ರೆ ಅಧಿಕಾರಿಗಳು, ಛೋಟಾ ರಾಜನ್ ಇನ್ನೂ ಜೀವಂತವಾಗಿದ್ದಾರೆ. ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 62 ವರ್ಷ ವಯಸ್ಸಿನ ಪಾತಕಿಯನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಗಿತ್ತು.

SCROLL FOR NEXT