ದೇಶ

ಗುಜರಾತ್‌ನಲ್ಲಿ ಆಸ್ಪತ್ರೆಗೆ ದಾಖಲಾಗಲು ಕೋವಿಡ್ ಪಾಸಿಟಿವ್ ವರದಿ ಅಗತ್ಯವಿಲ್ಲ

Lingaraj Badiger

ಅಹಮದಾಬಾದ್: ರಾಜ್ಯದಲ್ಲಿ ಆಸ್ಪತ್ರೆಗಳಿಗೆ ದಾಖಲಾಗಲು ರೋಗಿಗಳು ಕೋವಿಡ್ ಪಾಸಿಟಿವ್ ವರದಿ ತರುವ ಅಗತ್ಯ ಇಲ್ಲ ಎಂದು ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ.

ಇದಕ್ಕೂ ಮುನ್ನ ಗುಜರಾತ್ ಆಸ್ಪತ್ರೆಗಳಲ್ಲಿ ದಾಖಲಾಗಲು ಪಾಸಿಟಿವ್ ವರದಿ ಕೊಂಡೊಯ್ಯುವುದು ಕಡ್ಡಾಯವಾಗಿತ್ತು.

ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಎಲ್ಲಾ ಆಸ್ಪತ್ರೆಗಳು ಕೊರೋನಾ ವೈರಸ್ ರೋಗ ಲಕ್ಷಣಗಳನ್ನು ಹೊಂದಿರುವ "ಶಂಕಿತ ರೋಗಿಗಳನ್ನು" ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಮತ್ತು ಪಾಸಿಟಿವ್ ವರದಿ ನೀಡುವಂತೆ ಒತ್ತಾಯಿಸುವಂತಿಲ್ಲ ಎಂದು ಹೇಳಿದೆ.

ಆಂಬ್ಯುಲೆನ್ಸ್‌ಗಳಲ್ಲಿ ಅಥವಾ ಖಾಸಗಿ ವಾಹನಗಳಲ್ಲಿ ಬರುವ ಎಲ್ಲಾ ಶಂಕಿತ ಕೋವಿಡ್-19 ರೋಗಿಗಳನ್ನು ದಾಖಲಿಸಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಆಂಬುಲೆನ್ಸ್‌ಗಳನ್ನು ಹೊರತುಪಡಿಸಿ(108 ಆಂಬ್ಯುಲೆನ್ಸ್ ಸೇವೆಯ) ಇತರೆ ವಾಹನಗಳಲ್ಲಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂದು ಈ ಹಿಂದೆ ಹಲವರು ದೂರು ನೀಡಿದ್ದರು.

SCROLL FOR NEXT