ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 4.14 ಲಕ್ಷ ಹೊಸ ಕೇಸ್ ಪತ್ತೆ, 3,915 ಮಂದಿ ಸಾವು

ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಶುಕ್ರವಾರ ಸೋಂಕು ಮತ್ತು ಸಾವು ಎರಡರಲ್ಲೂ ಮತ್ತೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.

ನವದೆಹಲಿ: ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಶುಕ್ರವಾರ ಸೋಂಕು ಮತ್ತು ಸಾವು ಎರಡರಲ್ಲೂ ಮತ್ತೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 

ಶುಕ್ರವಾರದಂದು ದೇಶದಲ್ಲಿ ಮತ್ತೆ ದಾಖಲೆಯ 4,14,188 ಹೊಸ ಪ್ರಕರಣಗಳು ದೃಢವಾಗಿವೆ ಮತ್ತು ದಾಖಲೆಯ 3,915 ಸಾವು ಸಂಭವಿಸಿದೆ. ಗುರುವಾರ ಕೂಡ ದೇಶದಲ್ಲಿ 4.14 ಲಕ್ಷ ಹೊಸ ಕೇಸ್ ದಾಖಲಾಗಿದ್ದವು. ಈ ಮೂಲಕ ದೇಶದಲ್ಲಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.14 ಕೋಟಿಗೆ ಏರಿಕೆಯಾಗಿದೆ. 

ಇನ್ನು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಇದೀಗ ಸಾವಿನ ಸಂಖ್ಯೆ 2,34,083ಕ್ಕೆ ತಲುಪಿದೆ. 

ಸೋಂಕಿತರ ಸಂಖ್ಯೆ ಸತತ ಏರುತ್ತಿರುವ ಪರಿಣಾಮ ದೇಶದ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 36,45,164ಕ್ಕೆ ಹೆಚ್ಚಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,31,507 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,76,12,351ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 18,26,490 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29,86,01,699 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 16,49,73,058 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!