ನೋಯ್ಡಾ: ಹಿರಿಯ ಪತ್ರಕರ್ತ ಶೇಷ್ ನಾರಾಯಣ್ ಸಿಂಗ್ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 70 ವರ್ಷದ ಪತ್ರಕರ್ತನನ್ನು ಕೊರೋನಾ ಕಂಡುಬಂದ ಹಿನ್ನೆಲೆ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಜಿಮ್ಸ್) ದಾಖಲಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಸಿಂಗ್ ಅವರನ್ನು ಸದಾ ಸ್ಮರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಮೃತರಿಗೆ ಗೌರವ ಸಲ್ಲಿಸಿದ್ದಾರೆ. ಅವರ ನಿಧನ ಅತ್ಯಂತ ನೋವಿನಿಂದ ಕೂಡಿದೆ ಎಂದು ಪ್ರಧಾನಿ ನುಡಿದರು.
ವೃತ್ತಿಪರ ಪತ್ರಕರ್ತ ಮತ್ತು ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ನ್ಯೂಸ್ ಆಂಕರ್ ಆಗಿದ್ದು ಎನ್‌ಡಿಟಿವಿಯಲ್ಲಿ ಸುದ್ದಿ ಸಂಪಾದಕರಾಗಿದ್ದರು. ಅನೇಕ ನ್ಯೂಸ್ ಚಾನೆಲ್‌ಗಳಲ್ಲಿ ಕೆಲಸ ಮಾಡಿದ್ದರು,
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಇತರ ಹಿರಿಯ ನಾಯಕರು ಸಹ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಮತ್ತು ನೋಯ್ಡಾ ಶಾಸಕ ಪಂಕಜ್ ಸಿಂಗ್ ಪತ್ರಕರ್ತರನ್ನು ನೆನೆದು ಟ್ವೀಟ್ ಮಾಡಿದ್ದಾರೆ.