ದೇಶ

ಬಿಜೆಪಿ ಯೋಧನಾಗಿ ನನ್ನ ಹೋರಾಟ ಮುಂದುವರಿಯುತ್ತದೆ: ಮುಕುಲ್ ರಾಯ್

Lingaraj Badiger

ನವದೆಹಲಿ: ಬಿಜೆಪಿಯ ಉಪಾಧ್ಯಕ್ಷ ಮತ್ತು ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಮುಕುಲ್ ರಾಯ್ ಅವರು ಪಕ್ಷವನ್ನು ತೊರೆಯಬಹುದು ಎಂಬ ಉಹಾಪೋಹಗಳನ್ನು ಶನಿವಾರ ತಿರಸ್ಕರಿಸಿದ್ದಾರೆ.

"ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಬಿಜೆಪಿಯ ಯೋಧನಾಗಿ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಮುಕುಲ್ ರಾಯ್ ಹೇಳಿದ್ದಾರೆ.

ಮುಕುಲ್ ರಾಯ್ ಅವರು 2017ರಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂತರ ಎರಡನೇ ಅತ್ಯಂತ ಶಕ್ತಿಶಾಲಿ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದರು.

ಇದೀಗ ಬಿಜೆಪಿ ತೊರೆಯಲಿದ್ದಾರೆ ಎಂಬ ಉಹಾಪೋಹಗಳಿಗೆ ಟ್ವೀಟ್ ಮೂಲಕ ಉತ್ತರಿಸಿರುವ ಮುಕುಲ್ ರಾಯ್ ಅವರು, "ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಬಿಜೆಪಿಯ ಯೋಧನಾಗಿ ನನ್ನ ಹೋರಾಟ ಮುಂದುವರಿಯುತ್ತದೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯ ಹೊಂದಿದ್ದೇನೆ" ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಯ್ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಟಿಎಂಸಿ ಪ್ರತಿಸ್ಪರ್ಧಿ ಕೇಸರಿ ಪಕ್ಷದ ವಿರುದ್ಧ ದೊಡ್ಡ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬಂದಿದೆ.

ಇನ್ನು ಮುಕುಲ್ ರಾಯ್ ಹೇಳಿಕೆಯನ್ನು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶ್ಲಾಘಿಸಿದ್ದು, ಇದು ಪ್ರತಿ ಬಿಜೆಪಿ ಕಾರ್ಯಕರ್ತರಿಗೆ ಆದರ್ಶಪ್ರಾಯವಾಗಿದೆ ಮತ್ತು ಎಲ್ಲರಿಗೂ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ.

SCROLL FOR NEXT