ಕೋವಿಡ್-19 ಲಸಿಕೆ (ಸಂಗ್ರಹ ಚಿತ್ರ) 
ದೇಶ

ರಾಜ್ಯಗಳ ಬಳಿ ಇನ್ನೂ 84 ಲಕ್ಷ ಡೋಸ್ ಕೋವಿಡ್ ಲಸಿಕೆ ಲಭ್ಯ, ಇದುವರೆಗೆ 17.49 ಕೋಟಿ ಪೂರೈಕೆ: ಕೇಂದ್ರ

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 53 ಲಕ್ಷ (53,25,000)ಕೋವಿಡ್‍ ಲಸಿಕೆ ಡೋಸ್‍ ಗಳನ್ನು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 53 ಲಕ್ಷ (53,25,000)ಕೋವಿಡ್‍ ಲಸಿಕೆ ಡೋಸ್‍ ಗಳನ್ನು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೇಂದ್ರ ಸರ್ಕಾರ ಈವರೆಗೆ 17.49 ಕೋಟಿಗೂ ಹೆಚ್ಚು ಉಚಿತ ಲಸಿಕೆ ಡೋಸ್ ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪೂರೈಸಿದೆ. ಅನುಪಯುಕ್ತ ಲಸಿಕೆ ಸೇರಿದಂತೆ  16,65,49,583 ಡೋಸ್‍ ಗಳನ್ನು ದೇಶಾದ್ಯಂತ ಈವರೆಗೆ ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 84 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ (84,08,187) ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.

ದೆಹಲಿಗೆ 40.22 ಲಕ್ಷ ಕೋವಿಡ್ ಲಸಿಕೆ ಡೋಸ್ ನೀಡಲಾಗಿದ್ದು, ಅದರಲ್ಲಿ 36.09 ಲಕ್ಷ ಡೋಸ್‌ಗಳನ್ನು ಬಳಸಲಾಗಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ 4.12 ಲಕ್ಷ ಡೋಸ್‌ಗಳ ಬಾಕಿ ಉಳಿದಿವೆ ಮತ್ತು ಮುಂದಿನ ಮೂರು ದಿನಗಳಲ್ಲಿ ಇನ್ನೂ ಒಂದು ಲಕ್ಷ ಡೋಸ್ ಲಸಿಕೆ ನೀಡುವ ಸಾಧ್ಯತೆಯಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!