ದೇಶ

ದೇಶಾದ್ಯಂತ 9 ಲಕ್ಷ ಸೋಂಕಿತರು ಆಕ್ಸಿಜನ್ ಬೆಂಬಲದಲ್ಲಿದ್ದು, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ: ಕೇಂದ್ರ

Lingaraj Badiger

ನವದೆಹಲಿ: ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ.

ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಚರ್ಚಿಸಲು ಸಚಿವರ ತಂಡ(ಜಿಒಎಂ)ದ 25ನೇ ವರ್ಚುವಲ್ ಸಭೆ ಉದ್ದೇಶಿಸಿ ಮಾತನಾಡಿದ ಹರ್ಷವರ್ಧನ್ ಅವರು, ದೇಶಾದ್ಯಂತ ಶೇ. 1.34 ರಷ್ಟು ಕೋವಿಡ್ ಸೋಂಕಿತರು ಐಸಿಯುನಲ್ಲಿದ್ದಾರೆ, ಶೇ.0.39 ರಷ್ಟು ಪ್ರಕರಣಗಳು ವೆಂಟಿಲೇಟರ್ ಮತ್ತು ಶೇ. 3.70 ಕೋವಿಡ್ ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಹೇಳಿದರು.

ದೇಶಾದ್ಯಂತ ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,70,841 ರೋಗಿಗಳು ವೆಂಟಿಲೇಟರ್‌ಗಳಲ್ಲಿದ್ದಾರೆ ಮತ್ತು 9,02,291 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ವಿದೇಶಾಂಗ ಸಚಿವ ಎಸ್.ಜೈಶಂಕರ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಎಸ್ ಪುರಿ, ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯ ಸಚಿವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಸದಸ್ಯ ವಿನೋದ್ ಕೆ ಪೌಲ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.

SCROLL FOR NEXT