ದೇಶ

ಮಹಾರಾಷ್ಟ್ರ ಕೋವಿಡ್ ಪರಿಸ್ಥಿತಿ ಕುರಿತು ಸಿಎಂ ಉದ್ಧವ್ ಠಾಕ್ರೆ ಜತೆ ಮೋದಿ ಚರ್ಚೆ

Lingaraj Badiger

ನವದೆಹಲಿ: ಮಹಾರಾಷ್ಟ್ರದ ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ್ದಾರೆ.

ರಾಜ್ಯಗಳಲ್ಲಿನ ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಮೋದಿ ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಸಂವಹನ ನಡೆಸುತ್ತಿದ್ದಾರೆ. ಅದರಂತೆ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ್ದಾರೆ.

ಕೊರೋನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪರಿಣಾಮ ಬೀರಿದ್ದು, ಮುಂಬೈ ಸೇರಿದಂತೆ ಕೆಲವು ನಗರಗಳಲ್ಲಿ ಈಗ ಪರಿಸ್ಥಿತಿ ಸುಧಾರಣೆ ಕಂಡಿದ್ದರೂ, ರಾಜ್ಯದ ಅನೇಕ ಭಾಗಗಳಲ್ಲಿನ ಪರಿಸ್ಥಿತಿ ಇನ್ನೂ ಕಳವಳಕಾರಿಯಾಗಿದೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ 54,000 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

SCROLL FOR NEXT