ದೇಶ

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ವೀರಪ್ಪ ಮೊಯ್ಲಿ

Lingaraj Badiger

ನವದೆಹಲಿ: ಕೊರೋನಾ ವೈರಸ್ ಎರಡನೇ ಅಲೆಯನ್ನು ಸರಿಯಾಗಿ ನಿಭಾಯಿಸಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ, ಕೇಂದ್ರ "ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ" ಮತ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಮತ್ತು ಸಾಂಕ್ರಾಮಿಕ ರೋಗವನ್ನು ಎದುರಿಸಲು "ರಾಷ್ಟ್ರೀಯ ಕಾರ್ಯತಂತ್ರ ರೂಪಿಸಿಲ್ಲ" ಎಂದು ಶನಿವಾರ ಆರೋಪಿಸಿದ್ದಾರೆ. 

ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್, ಆಮ್ಲಜನಕ ಮತ್ತು ವೆಂಟಿಲೇಟರ್‌ಗಳು ಕೊರತೆ ಇದ್ದು, ಪ್ರಸ್ತುತ ಸನ್ನಿವೇಶವನ್ನು ಯುದ್ಧದಂತಹ ಸನ್ನಿವೇಶವೆಂದು ಪರಿಗಣಿಸುವ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದ ಮಾಜಿ ಸಿಎಂ, ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳಿಗೆ ಆಮ್ಲಜನಕದ ಹಂಚಿಕೆಯ ಬಗ್ಗೆ ಸರಿಯಾದ ನೀತಿ ಇಲ್ಲ ಎಂದು ದೂರಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವು ದೇಶವನ್ನು ತೀವ್ರವಾಗಿ ಬಾಧಿಸಿದೆ ಮತ್ತು ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ತಮಿಳುನಾಡಿನಂತಹ ರಾಜ್ಯಗಳಲ್ಲಿ ಹಲವಾರು ಹಾಟ್ ಸ್ಪಾಟ್‌ಗಳಿವೆ ಎಂದು ಕೇಂದ್ರದ ಮಾಜಿ ಸಚಿವರು ಹೇಳಿದರು.

ಕೊರೋನಾ ಎರಡನೇ ಅಲೆಯೂ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಕವಾಗಿ ಹರಡಿಸಿದೆ ಎಂದು ವೀರಪ್ಪ ಮೊಯ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT