ಕೊರೋನಾ ಕರ್ಫ್ಯೂ 
ದೇಶ

ಮಹಾರಾಷ್ಟ್ರ: 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಮಂದಿ ಸೋಂಕಿತರು ಗುಣಮುಖ

ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಬೈ: ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 50 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಾದ್ಯಂತ 53,605  ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ  ಸೋಂಕಿತರ ಸಂಖ್ಯೆ 50,53,336ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 864 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 75,277ಕ್ಕೆ ಏರಿಕೆಯಾಗಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 82,266 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 43,47,592 ಕ್ಕೇರಿಕೆಯಾಗಿದ್ದು, ಪ್ರಸ್ತುತ ಮಹಾರಾಷ್ಟ್ರದಲ್ಲಿ 6,28,213 ಸಕ್ರಿಯ ಪ್ರಕರಣಗಳಿವೆ.

ಮುಂಬೈನಲ್ಲಿ 2,664 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ಮಹಾರಾಷ್ಟ್ರ ಮತ್ತು ದೇಶದ ವಾಣಿಜ್ಯ ರಾಜಧಾನಿ ಎಂದೇ ಕರೆಯಲಾಗುವ ಮುಂಬೈನಲ್ಲಿ ಇಂದು 2,664 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 6,73,235ಕ್ಕೆ ಏರಿಕೆಯಾಗಿದ್ದು, 13,713 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್‌ ನಲ್ಲಿ ತುರ್ತು ಲ್ಯಾಂಡಿಂಗ್

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು