ಬಿಜೆಪಿ ಶಾಸಕ ಸುರೇಂದ್ರ ಸಿಂಗ್ 
ದೇಶ

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ

ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಲಖನೌ: ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ. 

ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಧಾನಗಳ ಕುರಿತಾದಂತೆ ಸುರೇಂದ್ರ ಸಿಂಗ್‌ ವೀಡಿಯೋ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಜನರಿಗೆ ಗೋಮೂತ್ರ ಹೇಗೆ ಸೇವಿಸಬೇಕು ಎಂದು ತಿಳಿಸುವುದರೊಂದಿಗೆ ತಾವೂ ಗೋಮೂತ್ರ ಕುಡಿದಿರುವುದು ಕಂಡು ಬಂದಿದೆ. 

ಪ್ರತೀನಿತ್ಯ 18 ಗಂಟೆಗಳ ಕಾಲ ನಾನು ಜನಸೇವೆ ಮಾಡುತ್ತಿದ್ದು, ಇದಕ್ಕೆ ಗೋಮೂತ್ರ ಸೇವನೆಯಿಂದ ದೊರಕಿದ ಆರೋಗ್ಯವೇ ಕಾರಣ ಎಂದು ಅವರು ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳದಷ್ಟು ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದ ಅವರು, ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಒಂದು ಲೋಟ ನೀರಿಗೆ ಗೋಮೂತ್ರ ಬೆರೆಸಿ ಕುಡಿದ ಬಳಿಕ ಅರ್ಧ ಗಂಟೆ ಏನನ್ನೂ ಸೇವಿಸಬಾರದು ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ. 

ಬಿಜೆಪಿ ಶಾಸಕರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೇಳಿಕೆ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!