ಟ್ರಾಕ್ಟರ್ ನಲ್ಲಿ ಮೃತದೇಹದೊಂದಿಗೆ ಸಾಗುತ್ತಿರುವ ಕುಟುಂಬಸ್ಥರು 
ದೇಶ

ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಾಗ ಸಿಗದೆ ಊರಿಂದ ಊರಿಗೆ ಅಲೆದಾಡಿದ ಕುಟುಂಬಸ್ಥರು!

ಜಾರ್ಖಂಡ್ ರಾಜ್ಯದ ಗುಮ್ಲಾ ಜಿಲ್ಲೆಯ ಸಾದರ್ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 65 ವರ್ಷದ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲು ಸ್ಥಳೀಯರು ಜಾಗ ನೀಡಲು ನಿರಾಕರಿಸಿದ್ದರಿಂದ ಸಾವನ್ನಪ್ಪಿ 24 ಗಂಟೆ ಕಳೆದಿದ್ದರೂ ಶವಸಂಸ್ಕಾರಕ್ಕಾಗಿ ಕುಟುಂಬಸ್ಥರು ಇನ್ನೂ ಕಾಯುವಂತಾಗಿದೆ.

ರಾಂಚಿ: ಜಾರ್ಖಂಡ್ ರಾಜ್ಯದ ಗುಮ್ಲಾ ಜಿಲ್ಲೆಯ ಸಾದರ್ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 65 ವರ್ಷದ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲು ಸ್ಥಳೀಯರು ಜಾಗ ನೀಡಲು ನಿರಾಕರಿಸಿದ್ದರಿಂದ ಸಾವನ್ನಪ್ಪಿ 24 ಗಂಟೆ ಕಳೆದಿದ್ದರೂ ಶವ ಸಂಸ್ಕಾರಕ್ಕಾಗಿ ಕುಟುಂಬಸ್ಥರು ಇನ್ನೂ ಕಾಯುವಂತಾಗಿದೆ.

ಇಕ್ಲಾಸಸ್ ಲಕ್ರ ಎಂಬವರು ಕೋವಿಡ್-19 ನಿಂದ ಭಾನುವಾರ ಮೃತಪಟ್ಟಿದ್ದು, ಅವರ ಶವ ಸಂಸ್ಕಾರ ಮಾಡಲು ಒಂದು ಊರಿನಿಂದ
ಮತ್ತೊಂದು ಊರಿಗೆ ಅಲೆದಾಡಿದ್ದರೂ ಸ್ಥಳೀಯ ಗ್ರಾಮಸ್ಥರು ಕೂಡಾ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಆದ್ದರಿಂದ ಕೊನೆಗೆ ಬಿಷ್ಣುಪುರದ ವಿಭಾಗಧಿಕಾರಿ ಕಚೇರಿ ಬಳಿಗೆ ಶವವನ್ನು ತಂದಿದ್ದು, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸ್ಥಳೀಯ
ಆಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಲಕ್ರಾ ಭಾನುವಾರ ಮಧ್ಯಾಹ್ನ 12ಕ್ಕೆ ಮೃತಪಟ್ಟಿದ್ದು, ನಂತರ ಶವವನ್ನು ಮೊದಲಿಗೆ ಸಾಂಕ್ರಾಮಿಕದಿಂದ ಮೃತಪಟ್ಟ 
ಶವ ಸಂಸ್ಕಾರ ಮಾಡುವ ಸ್ಥಳವಾದ ಮುಂದರ್ ಡ್ಯಾಮ್  ಬಳಿಗೆ ತೆಗೆದುಕೊಂಡು ಹೋಗಿದ್ದಾರೆ. ಆದಾಗ್ಯೂ, ಅಲ್ಲಿ ಶವ ಹೂಳದಂತೆ
ಗ್ರಾಮಸ್ಥರು ತಡೆ ನೀಡಿದ್ದಾರೆ.

ನಂತರ ಹತ್ತಿರದಲ್ಲಿದ್ದ ಜೆಹಂಗುಟ್ವಾ ಹಳ್ಳಿಗೆ ಶವವನ್ನು ತೆಗೆದುಕೊಂಡು ಹೋಗಲಾಗಿದೆ. ಅಲ್ಲಿಯೂ ಕೂಡಾ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ತದನಂತರ ಬಹರಾಧಿಪ ಎಂಬ ಹಳ್ಳಿಗೆ ತೆಗೆದುಕೊಂಡು ಹೋದಾಗಲೂ ಅದೇ ರೀತಿಯ ಪರಿಸ್ಥಿತಿ ಎದುರಾಗಿದೆ. ಕೊನೆಗೆ ಟ್ರಾಕ್ಟರ್ ನಲ್ಲಿ ಶವವನ್ನು ತೆಗೆದುಕೊಂಡು ವಿಭಾಗಾಧಿಕಾರಿ ಕಚೇರಿ ಹೊರಗಡೆ ನಿಲ್ಲಿಸಲಾಗಿತ್ತು.

ಸೋಮವಾರ ತ್ವರಿತಗತಿಯಲ್ಲಿ ಕಾರ್ಯಪ್ರವೃತ್ತರಾದ ಸ್ಥಳೀಯ ಆಡಳಿತ ಚೇಡಾ ಹಳ್ಳಿಯಿಂದ ಎರಡು ಕಿಲೋ ಮೀಟರ್ ದೂರಕ್ಕೆ
ಶವವನ್ನು ತೆಗೆದುಕೊಂಡು ಹೋದಾಗ ಅಲ್ಲಿಯೂ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಇದೀಗ ಲಕ್ರಾ ಹುಟ್ಟರೂ ಜೋರಿಗೆ
ಮೃತದೇಹವನ್ನು ತೆಗೆದುಕೊಂಡು ಹೋಗಿದ್ದಾರೆ. 

ಮೃತದೇಹ ಸಂಸ್ಕಾರ ಮಾಡಲು ಊರಿಂದ ಊರಿಗೆ ಅಲೆದಾಡುತ್ತಿದ್ದರೂ ಸ್ಥಳೀಯ ಆಡಳಿತ ಯಾವುದೇ ನೆರವು ನೀಡುತ್ತಿಲ್ಲ. ಆರೋಗ್ಯ ಇಲಾಖೆಯಿಂದ ಕೇವಲ ಪಿಪಿಇ ಕಿಟ್ ಗಳನ್ನು ನೀಡಿದ್ದಾರೆ ಎಂದು ಲಕ್ರಾ ಕುಟುಂಬಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!