ಅನಂತ್ ನಾಗ್ ಎನ್ಕೌಂಟರ್: ಸೇನೆ ಗುಂಡಿಗೆ ಮೂವರು ಎಲ್ಇಟಿ ಉಗ್ರರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದ ವೈಲೂ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. ಈ ವೇಳೆ ಮೂವರು ಉಗ್ರರು ಅಡಗಿಕುಳಿತಿರುವುದು ಖಚಿತವಾಗಿತ್ತು. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು.
ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.