ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಕೇಸ್ ದಾಖಲಿಸಿದ ಇಡಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಕೇಸು ದಾಖಲಿಸಿದೆ.

ಅನಿಲ್ ದೇಶ್ ಮುಖ್
Shilpa D
Updated On : 11 May 2021, 3:01 pm

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಕೇಸು ದಾಖಲಿಸಿದೆ. 

ಸಿಬಿಐ ಸಲ್ಲಿಸಿದ ಎಫ್‌ಐಆರ್ ಆಧಾರದ ಮೇಲೆ ಈ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​​ಮುಖ್ ಮತ್ತು ‘ಅಪರಿಚಿತ ಇತರರು’ ತಮ್ಮ ಅಧಿಕೃತ ಸ್ಥಾನವನ್ನು ಅನಗತ್ಯ ಲಾಭ ಪಡೆಯಲು ಬಳಸಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ. 

Advertisement

Advertisement

ಇದರ ಜೊತೆಗೆ ಮುಂಬೈ ಪೊಲೀಸರ ವರ್ಗಾವಣೆ ಮತ್ತು ನೇಮಕಾತಿ ಮೇಲೆ ಪ್ರಭಾವ ಬೀರಿದೆ ಎಂದು ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದಾರೆ. ಸಿಬಿಐ ಪ್ರಕರಣದ ಹಣಕಾಸಿನ ಅಂಶಗಳನ್ನು ಇಡಿ ಪರಿಶೀಲನೆ ನಡೆಸುತ್ತಿತ್ತು.

ಅನಿಲ್ ದೇಶ್​​ಮುಖ್ ಅವರು ಮಹಾರಾಷ್ಟ್ರ ಗೃಹ ಸಚಿವರಾಗಿದ್ದಾಗ ಆಗಿನ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರನ್ನು ಮುಂಬೈನ ಹೋಟೆಲ್‌, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರು. ಸಂಗ್ರಹಿಸುವಂತೆ ಕೇಳಿಕೊಂಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments