ದೇಶ

ಕೋವಿಡ್-19: ಭಾರತದಲ್ಲಿಂದು 3.48 ಲಕ್ಷ ಹೊಸ ಕೇಸ್ ಪತ್ತೆ, 4,205 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,48,421 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4205 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,54,197ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,099ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,55,338 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,93,82,642ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 19,83,804 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  30,75,83,991 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 17,52,35,991 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

SCROLL FOR NEXT