ದೇಶ

ದೆಹಲಿಗೆ ಹೆಚ್ಚುವರಿ ಕೋವಾಕ್ಸಿನ್ ನೀಡಲು ಭಾರತ್ ಬಯೋಟೆಕ್ ನಕಾರ, ಮೋದಿ ಸರ್ಕಾರ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ: ಸಿಸೋಡಿಯಾ

Lingaraj Badiger

ನವದೆಹಲಿ: ರಾಷ್ಟ್ರ ರಾಜಧಾನಿಗೆ "ಹೆಚ್ಚುವರಿ" ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಹೇಳಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಕೋವಾಕ್ಸಿನ್ ದಾಸ್ತಾನು ಮುಗಿದಿದ್ದು, ಇದರ ಪರಿಣಾಮವಾಗಿ 17 ಶಾಲೆಗಳಲ್ಲಿ ಸ್ಥಾಪಿಸಲಾದ ಸುಮಾರು 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು ಸಿಸೋಡಿಯಾ ಅವರು ಹೇಳಿದ್ದಾರೆ.

ಸಂಬಂಧಪಟ್ಟ ಸರ್ಕಾರಿ ಅಧಿಕಾರಿಯ ಸೂಚನೆಯ ಮೇರೆಗೆ ಲಸಿಕೆ ಲಭ್ಯವಿಲ್ಲದ ಕಾರಣ ದೆಹಲಿ ಸರ್ಕಾರಕ್ಕೆ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಕೋವಾಕ್ಸಿನ್ ತಯಾರಕರು ಪತ್ರದಲ್ಲಿ ತಿಳಿಸಿದ್ದಾರೆ. 

ಇದರ ಅರ್ಥ ಮೋದಿ ಸರ್ಕಾರವು ಲಸಿಕೆ ಪೂರೈಕೆಯನ್ನು ನಿಯಂತ್ರಿಸುತ್ತಿದೆ ಎಂದು ಸಿಸೋಡಿಯಾ ದೂರಿದ್ದಾರೆ.

ಕೇಂದ್ರ ಸರ್ಕಾರ ಲಸಿಕೆಗಳನ್ನು ರಫ್ತು ಮಾಡುವುದನ್ನು ನಿಲ್ಲಿಸಬೇಕು ಮತ್ತು ದೇಶದ ಎರಡು ತಯಾರಕರ ಲಸಿಕೆ ಸೂತ್ರವನ್ನು ಸಾಮೂಹಿಕ ಉತ್ಪಾದನೆಗಾಗಿ ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಬೇಕು ಎಂದು ದೆಹಲಿ ಉಪಮುಖ್ಯಮಂತ್ರಿ ಹೇಳಿದ್ದಾರೆ.

ಭಾರತದಲ್ಲಿ ಬಳಕೆಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಲಸಿಕೆಗಳನ್ನು ಅನುಮೋದಿಸಬೇಕು ಸಿಸೋಡಿಯಾ ಅವರು ಕೇಂದ್ರ ಸರ್ಕಾರ ಒತ್ತಾಯಿಸಿದರು ಮತ್ತು ಮೂರು ತಿಂಗಳೊಳಗೆ ಎಲ್ಲರಿಗೂ ಲಸಿಕೆ ನೀಡುವಂತೆ ರಾಜ್ಯಗಳಿಗೆ ಸೂಚಿಸಬೇಕು ಎಂದಿದ್ದಾರೆ.

SCROLL FOR NEXT