ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ 
ದೇಶ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಗೆ ಕೊರೋನಾ ಪಾಸಿಟಿವ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ನ್ಯಾಯಾಧೀಶರ ಸಿಬ್ಬಂದಿಯೂ ಸಹ ಈ ಹಿಂದೆ ಪಾಸಿಟಿವ್ ವರದಿ ಪಡೆದಿದ್ದರು. ಇದೀಗ ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೂ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದು ಸದ್ಯ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸುಪ್ರೀಂ ಕೋರ್ಟ್ ಇ-ಸಮಿತಿಯ ಅಧ್ಯಕ್ಷರಾಗಿ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೇಶಾದ್ಯಂತ ನ್ಯಾಯಾಲಯಗಳು ವರ್ಚುವಲ್ ಆಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಕೋವಿಡ್  19 ಸಮಸ್ಯೆಗಳಿಗೆ ಸಂಬಂಧಿಸಿದ ಸುಯೊ ಮೋಟು ಪ್ರಕರಣವನ್ನು ಆಲಿಸುತ್ತಿರುವ ನ್ಯಾಯಪೀಠದ ಮುಖ್ಯಸ್ಥರಾಗಿದ್ದಾರೆ.

ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ನ ನಾಲ್ಕು ನ್ಯಾಯಾಧೀಶರು ಕೊರೋನಾ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದರು. ಅವರ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT