ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರ 12-16 ವಾರಗಳ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ!

ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳಿಗೆ ವಿಸ್ತರಿಸಬೇಕೆಂಬ ಸರ್ಕಾರದ ಸಮಿತಿಯೊಂದರ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಅನುಮೋದಿಸಿರುವುದಾಗಿ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಕೋವಿಶೀಲ್ಡ್
Nagaraja AB
Updated On : 13 May 2021, 8:00 pm

ನವದೆಹಲಿ: ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳಿಗೆ ವಿಸ್ತರಿಸಬೇಕೆಂಬ ಸರ್ಕಾರದ ಸಮಿತಿಯೊಂದರ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಅನುಮೋದಿಸಿರುವುದಾಗಿ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಆದಾಗ್ಯೂ, ಕೋವಾಕ್ಸಿನ್ ಲಸಿಕೆ ಡೋಸ್ ಗಳ ನಡುವಣ ಅಂತರಕ್ಕೆ ರೋಗ ನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ
ಗುಂಪು (ಎನ್ ಟಿಎಜಿಐ) ಯಾವುದೇ ಬದಲಾವಣೆಯನ್ನು ಸೂಚಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಲಭ್ಯವಿರುವ ವಿಶೇಷವಾಗಿ ಇಂಗ್ಲೆಂಡ್ ನಲ್ಲಿನ ನೈಜ- ಜೀವನ ಪುರಾವೆ ಆಧರಿಸಿ ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು  12-16 ವಾರಗಳಿಗೆ ವಿಸ್ತರಿಸಲು ಕೋವಿಡ್-19 ಕುರಿತ ತಜ್ಞರ ಸಮಿತಿ ಒಪ್ಪಿಕೊಂಡಿದೆ. ಕೋವಾಕ್ಸಿನ್ ಲಸಿಕೆ ಡೋಸ್ ಗಳ ನಡುವಣ ಅಂತರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ  ಕೋವಿಡ್ ಲಸಿಕೆ ಎರಡು ಡೋಸ್ ಗಳ ನಡುವಿನ ಅಂತರ ಪ್ರಸ್ತುತ 6-8 ವಾರಗಳಷ್ಟಿದೆ.

Advertisement

Advertisement

ಅನೇಕ ರಾಜ್ಯಗಳಲ್ಲಿ ಲಸಿಕೆ ಕೊರತೆ ವರದಿಯಾಗುತ್ತಿದ್ದಂತೆ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಹೆಚ್ಚುತ್ತಿರುವ ಬೇಡಿಕೆಗನುಗುಣವಾಗಿ ಲಸಿಕೆ ಪೂರೈಕೆಯಲ್ಲಿ ಕೊರತೆಯಾಗಿರುವುದರಿಂದ ದೆಹಲಿ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳು ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಿವೆ.

 ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು ಎರಡನೇ ಬಾರಿಗೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಡೋಸ್ ಗಳ ನಡುವಣ ಅಂತರವನ್ನು  28 ದಿನಗಳಿಂದ 6-8 ವಾರಗಳಿಗೆ ವಿಸ್ತರಿಸುವಂತೆ ಮಾರ್ಚ್ ತಿಂಗಳಿನಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿತ್ತು.

ನೀತಿ ಆಯೋಗದ ಸದಸ್ಯ ಡಾ. ವಿಕೆ. ಪೌಲ್ ನೇತೃತ್ವದಲ್ಲಿನ ಕೋವಿಡ್-19 ಲಸಿಕೆ ನೀಡಿಕೆ ಕುರಿತ ರಾಷ್ಟ್ರೀಯ  ತಜ್ಞರ ಸಮಿತಿ ನಿನ್ನೆ ನಡೆದ ಸಭೆಯಲ್ಲಿ ಕೋವಿಡ್-19 ವರ್ಕಿಂಗ್ ಗ್ರೂಪ್ ಶಿಫಾರಸನ್ನು ಒಪ್ಪಿಕೊಂಡಿದೆ ಎಂದು ಸಚಿವಾಲಯ ಹೇಳಿದೆ.

ಐಎನ್ ಸಿಎಲ್ ಇಎನ್ ಟ್ರಸ್ಟ್ ನಿರ್ದೇಶಕ ಡಾ. ಎನ್. ಕೆ. ಅರೋರಾ ನೇತೃತ್ವದಲ್ಲಿನ ಕೋವಿಡ್-19 ವರ್ಕಿಂಗ್ ಗ್ರೂಪ್ ನಲ್ಲಿ 
ಪುದುಚೇರಿಯ ಜಿಐಪಿಎಂಇಆರ್ ಡೀನ್, ಡಾ. ರಾಕೇಶ್ ಅಗರ್ ವಾಲ್, ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜಿನ ಪ್ರೊಫೆಸರ್
 ಡಾ. ಗಗನ್ ದೀಪ್ ಕಾಂಗ್, ಮತ್ತಿತರರು ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments