ದೇಶ

'ಉತ್ತಮ ಫಲಿತಾಂಶ'ದ ನಂತರ ಬಿಹಾರದಲ್ಲಿ ಮೇ 25 ರವರೆಗೆ ಲಾಕ್ ಡೌನ್ ವಿಸ್ತರಣೆ

Lingaraj Badiger

ಪಾಟ್ನಾ: ಬಿಹಾರದಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 25 ರವರೆಗೆ ವಿಸ್ತರಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

ಮೇ 5 ರಿಂದ 15 ರವರೆಗೆ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು ಉನ್ನತ ಮಟ್ಟದ ಸಭೆ ನಡೆಸಿದ ನಂತರ ನಿತೀಶ್ ಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ.

ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಬಿಹಾರದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಪರಿಶೀಲಿಸಲಾಯಿತು. ಲಾಕ್‌ಡೌನ್‌ ಉತ್ತಮ ಫಲಿತಾಂಶ ನೀಡಿರುವುದು ಸ್ಪಷ್ಟವಾಗಿದೆ. ಆದ್ದರಿಂದ, ಲಾಕ್ ಡೌನ್ ಅನ್ನು ಇನ್ನೂ 10 ದಿನಗಳವರೆಗೆ ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೇ 16 ರಿಂದ 25 ರವರೆಗೆ ಲಾಕ್ ಡೌನ್ ವಿಸ್ತರಿಸಲಾಗುತ್ತಿದೆ" ಎಂದು ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಬಿಹಾರದಲ್ಲಿ ಏಫ್ರಿಲ್ ಆರಂಭದಿಂದ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ 9863 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

SCROLL FOR NEXT