ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ 
ದೇಶ

ತಮಿಳು ನಾಡು: ಕಡಲೂರಿನ ಕೀಟನಾಶಕ ಕಾರ್ಖಾನೆಯಲ್ಲಿ ಬೆಂಕಿ ದುರಂತ; ನಾಲ್ವರು ಸಾವು, 15 ಮಂದಿಗೆ ಗಾಯ

ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಚೆನ್ನೈ: ಕೀಟನಾಶಕ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ತಮಿಳು ನಾಡಿನ ಕಡಲೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಡಲೂರಿನ ಕುಡಿಕಾಡು ಎಂಬಲ್ಲಿ ಸಿಪ್ಕೊಟ್ ಕೈಗಾರಿಕಾ ಎಸ್ಟೇಟ್ ನಲ್ಲಿರುವ ಕೀಟನಾಶಕ ತಯಾರಿಕಾ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂತಹ ಬೆಂಕಿ ಅವಘಡದಂತಹ ದುರ್ಘಟನೆಗಳು ನಡೆಯುವುದನ್ನು ತಪ್ಪಿಸದಿದ್ದರೆ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ ವಿ ಗಣೇಶನ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಮೂವರನ್ನು ರಾಜ್ ಕುಮಾರ್, ಗಣಪತಿ ಮತ್ತು ಸವಿತಾ ಎಂದು ಗುರುತಿಸಲಾಗಿದ್ದು ನಾಲ್ಕನೇ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡ ಸಂಭವಿಸುವ ವೇಳೆ ಸುಮಾರು 15 ಮಂದಿ ಕಾರ್ಮಿಕರು ಒಳಗಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿಹೋಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!