ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.
ಭಾರತೀಯ ನಾಗರಿಕ ಸೇನೆ (ಐಎಎಸ್) ಭಾರತೀಯ ವಿದೇಶಾಂಗ ಸೇವೆ (ಐಎಫ್ ಎಸ್) ಭಾರತೀಯ ಪೊಲೀಸ್ ಸೇವೆ (ಐಎಫ್ಎಸ್) ಮತ್ತಿತರ ಅಧಿಕಾರಿಗಳ ಆಯ್ಕೆಗಾಗಿ ಪ್ರತಿವರ್ಷ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಯುಪಿಎಸ್ ಸಿ ನಡೆಸುತ್ತದೆ.
ಆದರೆ, ಈ ಬಾರಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10 ರಂದು ಪ್ರಿಲಿಮಿನರಿ ಪರೀಕ್ಷೆ ನಡೆಸಲಾಗುವುದು ಎಂದು ಯುಪಿಎಸ್ ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.