ದೇಶ

ಆಂಧ್ರಪ್ರದೇಶ: ಸಿಎಂ ಜಗನ್ ವಿರುದ್ಧ ಸಿಡಿದೆದ್ದ ಸಂಸದನ ವಿರುದ್ಧ ದೇಶದ್ರೋಹ ಕೇಸ್, ಬಂಧನ

Shilpa D

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರ ಜಾಮೀನು ರದ್ದುಪಡಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸದ ಕನಮುರಿ ರಘರಾಮ ಕೃಷ್ಣಂ ರಾಜು ಅವರನ್ನು ಆಂಧ್ರದ ಸಿಐಡಿ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಕನುಮುರಿ ರಘುರಾಮ ಕೃಷ್ಣಂರಾಜು (59) ಸ್ವಪಕ್ಷದ ವಿರುದ್ಧವೇ ಬಂಡಾಯ ಎದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಗನ್ ಮೋಹನ್ ರೆಡ್ಡಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. 

ರಾಜ್ಯ ಸರ್ಕಾರದ ವರ್ಚಸ್ಸಿಗೆ ಹಾನಿ ಮಾಡುವ ರೀತಿಯಲ್ಲಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ. ಕನುಮುರಿ ರಘುರಾಮ ಕೃಷ್ಣಂರಾಜು ವಿರುದ್ಧ ಸೆಕ್ಷನ್ 124 ಎ, 153 ಎ, 505 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. 

ಏಪ್ರಿಲ್ 27ರಂದು ಕನುಮುರಿ ರಘುರಾಮ ಕೃಷ್ಣಂರಾಜು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿಯೊಂದನ್ನು ಸಲ್ಲಿಸಿದ್ದರು. ಆಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಗನ್ ಮೋಹನ್ ರೆಡ್ಡಿಗೆ ನೀಡಿದ ಜಾಮೀನು ರದ್ದುಗೊಳಿಸಿ ಎಂದು ಕೋರಿದ್ದರು.

ರಘರಾಮ ಕೃಷ್ಣಂ ರಾಜು ಅವರು ಕೆಲವು ಸಮುದಾಯಗಳ ವಿರುದ್ಧ ದ್ವೇಷದ ಭಾಷಣ ಮಾಡಿದ್ದಾರೆ ಹಾಗೂ ಆಡಳಿತ ಸರ್ಕಾರದ ವಿರುದ್ಧ ಜನರಲ್ಲಿ ಅಸಮಾಧಾನ ಸೃಷ್ಟಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

SCROLL FOR NEXT