ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ -19: ಛತ್ತೀಸ್‌ಗಢದಲ್ಲಿ ಮೇ 31ರ ವರೆಗೆ ಲಾಕ್ ಡೌನ್ ವಿಸ್ತರಣೆ

ಆರ್ಥಿಕ ಮತ್ತು ಇತರ ಚಟುವಟಿಕೆಗಳಿಗೆ ಹೆಚ್ಚಿನ ವಿನಾಯ್ತಿ ನೀಡಿದರೂ ಸಹ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 31 ರವರೆಗೆ ವಿಸ್ತರಿಸುವಂತೆ ಎಲ್ಲಾ 28 ಜಿಲ್ಲಾಧಿಕಾರಿಗಳಿಗೆ ಛತ್ತೀಸ್‌ಗಢ ಸರ್ಕಾರ ಆದೇಶಿಸಿದೆ....

ರಾಯ್‌ಪುರ: ಆರ್ಥಿಕ ಮತ್ತು ಇತರ ಚಟುವಟಿಕೆಗಳಿಗೆ ಹೆಚ್ಚಿನ ವಿನಾಯ್ತಿ ನೀಡಿದರೂ ಸಹ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 31 ರವರೆಗೆ ವಿಸ್ತರಿಸುವಂತೆ ಎಲ್ಲಾ 28 ಜಿಲ್ಲಾಧಿಕಾರಿಗಳಿಗೆ ಛತ್ತೀಸ್‌ಗಢ ಸರ್ಕಾರ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಇಂದು ಮಧ್ಯರಾತ್ರಿಯಲ್ಲಿ ಕೊನೆಗೊಳ್ಳಲಿದ್ದು, ಈಗ ಅದನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ.

"ರಾಜ್ಯದಲ್ಲಿ ಲಾಕ್ ಡೌನ್ ಅನ್ನು ತೆಗೆದುಹಾಕಲಾಗುವುದಿಲ್ಲ. ಕೋವಿಡ್ ಪರಿಸ್ಥಿತಿ ಮತ್ತು ಪ್ರತಿಯೊಂದು ಜಿಲ್ಲೆಗಳಲ್ಲಿನ ಅಪಾಯಗಳನ್ನು ಅವಲಂಬಿಸಿ ಕೆಲವು ವಿನಾಯ್ತಿಗಳನ್ನು ಮಾತ್ರ ನೀಡಲಾಗುವುದು ಎಂದು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ನಿರ್ಬಂಧಗಳು ಮತ್ತು ವಿನಾಯ್ತಿಗಳು ಮೇ 31 ರವರೆಗೆ ಅನ್ವಯವಾಗಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಎಲ್ಲಾ ಕೋವಿಡ್ ನಿಯಮಗಳನ್ನು ಮತ್ತು ಕಾರ್ಮಿಕ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT