ದೇಶ

ಸರ್ಕಾರದ ವಿನಾಶಕಾರಿ ನೀತಿಯಿಂದಾಗಿ ಕೊರೋನಾ ಮೂರನೇ ಅಲೆ ಅಪ್ಪಳಿಸುವುದು ಖಚಿತ: ರಾಹುಲ್ ಗಾಂಧಿ ಎಚ್ಚರಿಕೆ

Raghavendra Adiga

ನವದೆಹಲಿ: ರಾಷ್ಟ್ರೀಯ ಲಸಿಕೆ ವಿತರಣಾ ಯೋಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ಇನಾಕ್ಯುಲೇಷನ್ ನೀತಿಯು ದೇಶದಲ್ಲಿ "ವಿನಾಶಕಾರಿ ಮೂರನೇ ಅಲೆಯನ್ನು ಖಚಿತಪಡಿಸುತ್ತದೆ" ಎಂದು ಹೇಳಿದ್ದಾರೆ.

ಕೊರೋನಾವೈರಸ್ ಸ್ ಸಂತ್ರಸ್ತರ ಶವಗಳು ನದಿಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಕಂಡುಬಂದ ನಂತರ ಪ್ರಧಾನಿ ಗಂಗಾ ಮಾತೆಯನ್ನು ದುಃಖಿಸುವಂತೆ" ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

"ಭಾರತ ಸರ್ಕಾರದ ಲಸಿಕೆ ವಿತರಣಾ ಯೋಜನೆ ವಿನಾಶಕಾರಿ ಮೂರನೇ ಅಲೆಯನ್ನು ಖಚಿತಪಡಿಸುತ್ತದೆ. ಇದನ್ನು  ಮತ್ತೆ ಸರಿದೂಗಿಸಲು ಅಸಾಧ್ಯ. ಭಾರತಕ್ಕೆ ಸರಿಯಾದ ಲಸಿಕೆ ವಿತರಣೆ ಯೋಜನೆಯ ಅಗತ್ಯವಿದೆ ಎಂದು ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಗಂಗಾ ನದಿಯ ಉದ್ದಕ್ಕೂ 1140 ಕಿ.ಮೀ ಪ್ರದೇಶದಲ್ಲಿ 2 ಸಾವಿರಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ ಎಂದು ಹೇಳುವ ಮಾಧ್ಯಮ ವರದಿಗಳನ್ನು ಟ್ಯಾಗ್ ಮಾಡಿ, "ಗಂಗಾ" ಎಂದು ಹೇಳುತ್ತಿದ್ದ ಒಬ್ಬರು ಇಂದು ತಾಯಿ ಗಂಗಾ ಮಾತೆಯನ್ನು ದುಃಖಿಸುವಂತೆ ಮಾಡಿದ್ದಾರೆ" ಎಂದು ಆರೋಪಿಸಿದರು.

ಲಸಿಕೆ ಯೋಜನೆ ಮತ್ತು ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ಬಗ್ಗೆ ರಾಹುಲ್ ಹಾಗೂ ಅವರ ಕಾಂಗ್ರೆಸ್ ಪಕ್ಷ ಪ್ರಧಾನಿ ಮತ್ತು ಅವರ ಸರ್ಕಾರದ ವಿರುದ್ಧ ಕಟುಟೀಕೆ ಮಾಡುತ್ತಿದೆ.

ಇದೇ ವೇಳೆ ರಾಹುಲ್ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಟೌಕ್ಟೇ ಚಂಡಮಾರುತದ ಸಮಯದಲ್ಲಿ ಜನರು ಎಚ್ಚರದಿಂದಿರುವಂತೆ ಸಲಹೆ ನೀಡಿದ್ದಾರೆ. ಅಗತ್ಯವಿರುವವರಿಗೆ ಎಲ್ಲಾ ನೆರವು ನೀಡುವಂತೆ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದರು. "ಮೇ 15ನಲ್ಲಿ ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಿಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದಾಗಲೇ ರಾಜ್ಯದ ಕರಾವಳಿ ಭಾಗಗಳು ಸೇರಿ ಅನೇಕ ಕಡೆ ಭಾರೀ ಮಳೆಯಾಗುತ್ತಿದೆ. "ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ" ಎಂದು ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

SCROLL FOR NEXT