ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಸ್ವಲ್ಪ ಇಳಿಕೆ: ದೇಶದಲ್ಲಿಂದು 3.26 ಲಕ್ಷ ಹೊಸ ಕೇಸ್ ಪತ್ತೆ, 3,890 ಮಂದಿ ಸಾವು

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಾ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಭಾರತದಲ್ಲಿಂದು 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಾ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಭಾರತದಲ್ಲಿಂದು 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,66,207ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 36,73,802ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,53,299 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,04,32,898ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 16,93,093 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,13,24,100 31,30,17,193 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,04,57,579 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!