ದೇಶ

ಕೋವಿಡ್-19: ಹೊಸ ಪ್ರಕರಣಗಳನ್ನು ಮೀರಿಸಿದ ಚೇತರಿಕೆ; ಸಕ್ರಿಯ ಪ್ರಕರಣಗಳ ಸಂಖ್ಯೆ 31,091 ರಷ್ಟು ಇಳಿಕೆ

Lingaraj Badiger

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚೇತರಿಕೆ ಪ್ರಮಾಣ ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸಿದೆ.

ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 2,04,32,898ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಇದೇ ಅವಧಿಯಲ್ಲಿ 3,26,098 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಇಂದು ಬೆಳಗ್ಗೆ ನವೀಕರಿಸಿದ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇಕಡಾ 83.83 ರಷ್ಟಿದ್ದು, ಇದು ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಭಾರತದ ದೈನಂದಿನ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳನ್ನು ಮೀರಿಸಿದೆ ಎಂದು ಸಚಿವಾಲಯ ತಿಳಿಸಿದೆ.

ಅಂಕಿ ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 53,249 ಸೋಂಕಿತರು ಚೇತರಿಕೆಯಾಗಿದ್ದು, ನಂತರದ ಸ್ಥಾನಗಳಲ್ಲಿ ಕರ್ನಾಟಕ (35,879), ಕೇರಳ (31,319), ಉತ್ತರ ಪ್ರದೇಶ (26,179), ತಮಿಳುನಾಡು (20,037), ಆಂಧ್ರಪ್ರದೇಶ (19,177), ಪಶ್ಚಿಮ ಬಂಗಾಳ (19,131) (15,365), ಹರಿಯಾಣ (14,577) ಮತ್ತು ದೆಹಲಿ (14,140) ಇವೆ.

SCROLL FOR NEXT