ಸಂಗ್ರಹ ಚಿತ್ರ 
ದೇಶ

ಥಾಣೆ ಕಟ್ಟಡ ಕುಸಿತ ಪ್ರಕರಣ: ಮಹಿಳೆಯ ಮೃತದೇಹ ಪತ್ತೆ, ಒಟ್ಟು ಸಾವಿನ ಸಂಖ್ಯೆ 5ಕ್ಕೆ ಏರಿಕೆ

ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗುವುದರೊಂದಿಗೆ ಜಿಲ್ಲೆಯ ಉಲ್ಲಾಸ್‌ನಗರ ಪಟ್ಟಣದಲ್ಲಿ ಶನಿವಾರ ಕಟ್ಟಡವೊಂದರ ಚಪ್ಪಡಿ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗುವುದರೊಂದಿಗೆ ಜಿಲ್ಲೆಯ ಉಲ್ಲಾಸ್‌ನಗರ ಪಟ್ಟಣದಲ್ಲಿ ಶನಿವಾರ ಕಟ್ಟಡವೊಂದರ ಚಪ್ಪಡಿ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮುನ್ನ 11 ಜನರನ್ನು ರಕ್ಷಿಸಲಾಗಿತ್ತು. ನಾಲ್ಕು ಅಂತಸ್ತಿನ ಕಟ್ಟಡದ ಅವಶೇಷಗಳ ಕೆಳಗಿದ್ದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಆದರೆ, ಓರ್ವ ಮಹಿಳೆ ನಾಪತ್ತೆಯಾಗಿದ್ದರು. ತೀವ್ರ ಶೋಧದ ನಂತರ ಸಂಧ್ಯಾ ದೋತ್ವಾಲ್ (45) ಅವರ ಮೃತದೇಹವನ್ನು ತಡರಾತ್ರಿ ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರೊಂದಿಗೆ, ದೋತ್ವಾಲ್ ಕುಟುಂಬದ ಮೂವರು ಚಪ್ಪಡಿ ಕುಸಿತ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ, ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು