ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಲಸಿಕೆಯ ಸುಮಾರು ಎರಡು ಕೋಟಿ ಡೋಸ್ ಗಳು ರಾಜ್ಯಗಳಲ್ಲಿ ಲಭ್ಯವಿದೆ: ಕೇಂದ್ರ ಆರೋಗ್ಯ ಸಚಿವಾಲಯ

ಕೋವಿಡ್-19 ಲಸಿಕೆಯ ಸುಮಾರು ಎರಡು ಕೋಟಿ ಡೋಸ್ ಗಳು ಸದ್ಯ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದ್ದು, ಮೂರು ದಿನಗಳೊಳಗೆ ಸುಮಾರು ಮೂರು ಲಕ್ಷ ಡೋಸ್ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.

ನವದೆಹಲಿ: ಕೋವಿಡ್-19 ಲಸಿಕೆಯ ಸುಮಾರು ಎರಡು ಕೋಟಿ ಡೋಸ್ ಗಳು ಸದ್ಯ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದ್ದು, ಮೂರು ದಿನಗಳೊಳಗೆ ಸುಮಾರು ಮೂರು ಲಕ್ಷ ಡೋಸ್ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.

ಕೇಂದ್ರ ಸರ್ಕಾರ ಈವರೆಗೂ ಸುಮಾರು 20 ಕೋಟಿ ( 20,76,10,230 ) ಲಸಿಕೆ ಡೋಸ್ ಗಳನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸಿದೆ. ವ್ಯರ್ಥವಾಗಿರುವ 18,71,13,705 ಡೋಸ್ ಸೇರಿದಂತೆ ಮೇ 16 ರವರೆಗಿನ ಸರಾಸರಿ ಅಂಕಿ ಅಂಶಗಳ ಆಧಾರದ ಮೇಲೆ ಒಟ್ಟು ಬಳಕೆಯನ್ನು ಲೆಕ್ಕ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕದ ವಿರುದ್ಧ ದೇಶಾದ್ಯಂತ ಲಸಿಕೆ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಉಚಿತವಾಗಿ ಲಸಿಕೆ ಡೋಸ್ ಪೂರೈಸುವ ಮೂಲಕ ಬೆಂಬಲಿಸುತ್ತಿದೆ. ಅಲ್ಲದೇ, ಲಸಿಕೆ ಉತ್ಪಾದನೆ ಹಾಗೂ ಪೂರೈಕೆಗಾಗಿ ಹೆಚ್ಚಿಸಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಸೋಂಕು ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆಯೊಂದಿಗೆ ವ್ಯಾಕ್ಸಿನೇಷನ್ ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸರ್ಕಾರದ ಸಮಗ್ರ ಕಾರ್ಯತಂತ್ರದ ಅವಿಭಾಜ್ಯ ಸ್ತಂಭವಾಗಿದೆ ಎಂದು ಸಚಿವಾಲಯ ಹೇಳಿದೆ.

ಮೇ 1 ರಿಂದ ಉದಾರ ಮತ್ತು ವೇಗದ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡಿಕೆ ಕಾರ್ಯತಂತ್ರವನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ ಪ್ರತಿ ತಿಂಗಳು, ಲಸಿಕೆ ಉತ್ಪಾದಕರಿಗೆ ಶೇ. 50 ರವರೆಗೆ ರಾಜ್ಯ ಸರ್ಕಾರಗಳಿಗೆ ಪೂರೈಸಲು ಅಧಿಕಾರ ಮತ್ತು ಪೂರ್ವ ಘೋಷಿತ ಬೆಲೆ ಅಡಿ  ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಡೋಸ್ ಗಳು ರಾಜ್ಯಗಳಿಗೆ ಮುಕ್ತವಾಗಿ ಲಭ್ಯವಾಗುವಂತೆ ಮಾಡುವುದು ಮುಂದುವರೆಯುತ್ತದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!