ಸ್ಟಾ ಲಿನ್ - ರಮೇಶ್ ಪೋಖ್ರಿಯಾಲ್ 
ದೇಶ

ಎನ್‌ಇಪಿ, ಇತರ ಪ್ರಮುಖ ವಿಷಯಗಳ ಕುರಿತ ಕೇಂದ್ರ ಶಿಕ್ಷಣ ಸಚಿವರೊಂದಿಗಿನ ಸಭೆ ಬಹಿಷ್ಕರಿಸಿದ ಸ್ಟಾಲಿನ್ ಸರ್ಕಾರ

ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಅವರು ನಡೆಸಿದ ವರ್ಚುವಲ್ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ.

ಚೆನ್ನೈ: ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಅವರು ನಡೆಸಿದ ವರ್ಚುವಲ್ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ.

ಇದು ಕೇಂದ್ರ ಸಚಿವರು ರಾಜ್ಯ ಸಚಿವರ ಬದಲು ನೇರವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದನ್ನು ತಮಿಳುನಾಡು ಸರ್ಕಾರ ವಿರೋಧಿಸಿದೆ.

ಹೊಸ ಶಿಕ್ಷಣ ನೀತಿ 2020 ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ತಮ್ಮ ಇಲಾಖೆಗೆ ಸಂವಹನ ಬಂದಿದೆ ಎಂದು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೊಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು ಪತ್ರವೊಂದನ್ನು ಬರೆದಿದ್ದು, ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸುವ ಬದಲು ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿದರೆ ಉತ್ತಮ ಎಂಬ ಅಂಶವನ್ನು ಕೇಂದ್ರಕ್ಕೆ ಒತ್ತಿಹೇಳಿದೆ. ಆದರೆ ಅವರ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

"ಸಚಿವರ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕೆಂಬ ನಮ್ಮ ವಿನಂತಿಯ ಹೊರತಾಗಿಯೂ, ಕೇಂದ್ರವು ಅಧಿಕಾರಿಗಳೊಂದಿಗೆ ಮಾತ್ರ ಚರ್ಚೆ ನಡೆಸುವ ಯೋಚನೆಯನ್ನು ಮುಂದುವರಿಸುವ ಆಯ್ಕೆ ಮಾಡಿದೆ. ಇದನ್ನು ವಿರೋಧಿಸಿ, ನಾವು ಈ ಸಭೆಯನ್ನು ಬಹಿಷ್ಕರಿಸಿದ್ದೇವೆ ಎಂದು ತಮಿಳುನಾಡು ಸಚಿವರು ಹೇಳಿದ್ದಾರೆ.

ಎನ್‌ಇಪಿ 2020 ರಲ್ಲಿ ಹಲವು ಸಮಸ್ಯೆಗಳಿವೆ ಎಂದು ಸಚಿವರು ಹೇಳಿದ್ದು, ಮೂರು ಭಾಷಾ ನೀತಿ, ಮೂರು, ಐದು ಮತ್ತು ಎಂಟನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗುವುದು, ಡಿಎಂಕೆ ಈಗಾಗಲೇ ಎನ್‌ಇಪಿ 2020ಯಲ್ಲಿನ ಹಲವು ಅಂಶಗಳನ್ನು ವಿರೋಧಿಸಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್