ದೇಶ

ಐಎನ್‌ಎಕ್ಸ್‌ ಮೀಡಿಯಾ ಹಗರಣ: ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆ

Srinivasamurthy VN

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರು ಆರೋಪಿಗಳಾಗಿರುವ ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ಪಾತ್ರ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಅಲ್ಲದೆ ಆರೋಪಿತಗಳಿಗೆ  ದಾಖಲೆಗಳನ್ನು ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನ್ಯಾಯಾಮೂರ್ತಿ ಸುರೇಶಕುಮಾರ್‌ ಕೈಟ್‌ ಅವರು ಚಿದಂಬರಂ ಹಾಗೂ ಪ್ರಕರಣದ ಇತರೆ ಆರೋಪಿಗಳಿಗೆ ನೋಟಿಸ್‌ ನೀಡಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು 305 ರೂ ಕೋಟಿ ವಿದೇಶಿ ಹೂಡಿಕೆಯನ್ನು ಸ್ವೀಕರಿಸಲು ಐಎನ್‌ಎಕ್ಸ್‌ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ  ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮೇ 15 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿತು.
 

SCROLL FOR NEXT