ಡಾ. ಕೆಕೆ ಅಗರ್ ವಾಲ್ 
ದೇಶ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಹೃದ್ರೋಗತಜ್ಞ ಡಾ. ಕೆ.ಕೆ. ಅಗರ್‌ವಾಲ್ ಕೋವಿಡ್ ಗೆ ಬಲಿ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆ.ಕೆ. ಅಗರ್‌ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆ.ಕೆ. ಅಗರ್‌ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ಡಾ. ಅಗರ್‌ವಾಲ್ (62) ಈ ಮೊದಲು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಕಳೆದ ವಾರ ಏಮ್ಸ್‌ಗೆ ದಾಖಲಿಸಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಅವರು ಸೋಮವಾರ ರಾತ್ರಿ 11:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಲಾಕ್‌ಡೌನ್ ಅವಧಿಯಲ್ಲಿ ಅವರು ವಿವಿಧ ಉಪನ್ಯಾಸ ಮತ್ತು ಶೈಕ್ಷಣಿಕ ಮಾಹಿತಿ ಸರಣಿ ವಿಡಿಯೊ ಮೂಲಕ 10 ಕೋಟಿಗೂ ಅ‌ಧಿಕ ಜನರನ್ನು ಆನ್‌ಲೈನ್ ಬಳಸಿ ತಲುಪಿದ್ದರು. 

ಜನರಿಗೆ ವಿವಿಧ ಮಾಹಿತಿ ನೀಡುವ ಮೂಲಕ ಅಸಂಖ್ಯ ಜೀವಗಳನ್ನು ಕಾಪಾಡಿದ್ದರು ಎಂದು ಅವರ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಅವರಿಗೆ 2010 ರಲ್ಲಿ ಪದ್ಮಶ್ರೀ ನೀಡಲಾಯಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ