ದೇಶ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣದ ವಿಚಾರಣೆಗೆ 'ಸುಪ್ರೀಂ' ಅಸ್ತು!

Vishwanath S

ಕೋಲ್ಕತ್ತಾ: ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ಸಂಬಂಧ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನೋಟೀಸ್ ಜಾರಿಗೊಳಿಸಿದೆ. 

ನ್ಯಾಯಮೂರ್ತಿಗಳಾದ ಬಿಆರ್ ಗವಾಲ್ ಮತ್ತು ವಿನೀತ್ ಸರನ್ ನೇತೃತ್ವದ ನ್ಯಾಯಪೀಠ ಇಂದು ಬಿಸ್ವಜಿತ್ ಸರ್ಕಾರ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿತು. 

ಬಿಸ್ವಜಿತ್ ಸರ್ಕಾರ್ ತನ್ನ ಸಹೋದರ ಅವಿಜಿತ್ ಸರ್ಕಾರ್ ನನ್ನು ಹಾಗೂ ತನ್ನ ಗಂಡ ಹರನ್ ಅಧಿಕಾರಿಯನ್ನು ಟಿಎಂಸಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದಾರೆ. 

ಇನ್ನು ಚುನಾವಣೋತ್ತರ ಹಿಂಸಾಚಾರಕ್ಕೆ ಕೇಂದ್ರ ಸಚಿವರ ಪ್ರಚೋದನೆ ನೀಡಿದ್ದಾರೆ ಎಂದು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬಂಗಾಳದಲ್ಲಿ ಈ ಹಿಂಸಾರದಲ್ಲಿ ಈವರೆಗೆ 16 ಮಂದಿ ಮೃತಪಟ್ಟಿದ್ದಾರೆ. 

SCROLL FOR NEXT