ಪಿ-305 ಬಾರ್ಜ್ 
ದೇಶ

'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಬಾರ್ಜ್ ಮುಳುಗಡೆ: ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವು

'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: 'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ ಕರಾವಳಿ ಪ್ರದೇಶದಲ್ಲಿ ಸುಮಾರು 35 ನಾಟಿಕಲ್ ಮೈಲು ದೂರದಲ್ಲಿ ದುರಂತಕ್ಕೀಡಾಗಿರುವ Papaa-305 ಬಾರ್ಜ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಾರು 261 ಮಂದಿಯಿದ್ದ Papaa-305 ಬಾರ್ಜ್ 'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಬಾರ್ಜ್ ನಲ್ಲಿದ್ದ 261 ಮಂದಿಯ ಪೈಕಿ 186 ಮಂದಿಯನ್ನು ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿತ್ತು. 

ಸೇನೆಯ ಕಮಾಂಡರ್ ಆಪರೇಷನ್ಸ್ ನ ನೇವಲ್ ಕಮಾಂಡ್ ಎಂ.ಕೆ. ಝಾ ಅವರು ಮಾತನಾಡಿ ಸಾವನ್ನಪ್ಪಿದವರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯಬೇಕಾಗಿದೆ. ಅಷ್ಟೇ ಅಲ್ಲ ಎಲ್ಲಾ ಸಾವು ಪ್ರಕರಣ ಪಿ.305 ಬಾರ್ಜ್ ನ ಸಿಬ್ಬಂದಿಗಳಿಗೆ ಸಂಬಂಧಿಸಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ ಎಂದು  ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ, ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

International Cricket: ಪಂದ್ಯವನ್ನೇ ಆಡದೇ 3 ದಶಕಗಳ ಹಳೆಯ ತೆಂಡೂಲ್ಕರ್ ದಾಖಲೆ ಮುರಿದ Vaibhav Sooryavanshi

SCROLL FOR NEXT