ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಕಶ್ಯಪ್ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.
53 ವರ್ಷದ ವಿಜಯ್ ಕಶ್ಯಪ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.
ವಿಜಯ್ ಕಶ್ಯಪ್ ಅವರ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್ ಮಾಡಿದ್ದಾರೆ.