ಕೊರೋನಾ ಪರೀಕ್ಷೆ 
ದೇಶ

ಕೋವಿಡ್-19: ದೇಶಾದ್ಯಂತ ಒಂದೇ ದಿನ 2.76 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 3,874 ಸಾವು!

ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.76 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,874 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.76 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,874 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,76,070 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 3,874 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  2,87,122 ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,69,077 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,23,55,440ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 31,29,878 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,55,010 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,23,56,187ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 18,70,09,792 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ