ಕೋವಿಡ್-19: ದೇಶಾದ್ಯಂತ ಒಂದೇ ದಿನ 4,209 ಮಂದಿ ಸಾವು, 2.59 ಲಕ್ಷ ಹೊಸ ಸೋಂಕು ಪ್ರಕರಣ ವರದಿ
ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.59 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,209 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.59 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,209 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,59,591 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,209 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,57,295 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,27,12,735ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,61,683 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,44,17,870ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈವರೆಗೂ 19,18,79,503 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.