ಸಂಗ್ರಹ ಚಿತ್ರ 
ದೇಶ

ಯಾಸ್ ಚಂಡಮಾರುತ: ಮೇ 26ಕ್ಕೆ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ, ಒಡಿಶಾದಲ್ಲಿ ತೀವ್ರ ಕಟ್ಟೆಚ್ಚರ

ಯಾಸ್ ಚಂಡಮಾರುತ ಇದೇ ಮೇ 26ಕ್ಕೆ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಭುವನೇಶ್ವರ: ಯಾಸ್ ಚಂಡಮಾರುತ ಇದೇ ಮೇ 26ಕ್ಕೆ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಒಡಿಶಾದ ಮುಖ್ಯ ಕಾರ್ಯದರ್ಶಿ ಸುರೇಶ್ ಚಂದ್ರ ಮಹಾಪಾತ್ರಾ ಅವರು, ಯಾಸ್ ಚಂಡಮಾರುತ ಇದೇ ಮೇ 26ಕ್ಕೆ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಚಂಡಮಾರುತ ಕುರಿತಂತೆ ರಾಜ್ಯ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ ಎಲ್ಲ ಕರಾವಳಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ  ಹೈ ಅಲರ್ಟ್ ಘೊಶಿಸಲಾಗಿದೆ ಎಂದು ಹೇಳಿದರು.

ಈ ಕುರಿತು ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎನ್‌ಡಿಆರ್‌ಎಫ್, ಕೋಸ್ಟ್‌ಗಾರ್ಡ್, ಐಎನ್‌ಎಸ್ ಚಿಲ್ಕಾ, ಡಿಜಿ ಪೊಲೀಸ್ ಮತ್ತು ಡಿಜಿ ಅಗ್ನಿಶಾಮಕ ವಿಭಾಗಗಳ ಅಧಿಕಾರಿಗಳ ಜೊತೆಗೆ ಶುಕ್ರವಾರ ಸಭೆ ನಡೆಸಲಾಗಿದೆ. ಅಂತೆಯೇ ಸಂಬಂಧಪಟ್ಟ  ಇಲಾಖೆಗಳಾದ ವಿದ್ಯುತ್ ಕಂಪನಿಗಳು, ಆರೋಗ್ಯ ಇಲಾಖೆ, ಗ್ರಾಮೀಣ ಮತ್ತು ನಗರ ನೀರು ಸರಬರಾಜು ಇಲಾಖೆ, ಒಡಿಶಾ ವಿಪತ್ತು ನಿರ್ವಹಣಾ ಪಡೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಅಗತ್ಯ ಮಾನವಶಕ್ತಿ ಮತ್ತು ಅಗತ್ಯ ಸಾಮಗ್ರಿಗಳೊಂದಿಗೆ ಸಿದ್ಧವಾಗಲು ಎಚ್ಚರಿಕೆ ವಹಿಸಲಾಗಿದೆ ಎಂದು ಮಹಾಪಾತ್ರಾ  ಹೇಳಿದ್ದಾರೆ.

ಇನ್ನೆರಡು ಮೂರು ದಿನಗಳಲ್ಲಿ ಸ್ಥಿತಿ ಇನ್ನಷ್ಟು ಸ್ಪಷ್ಟವಾಗಲಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಚಂಡಮಾರುತದ ದಾರಿಯ ಬಗ್ಗೆ ವಿಷಯಗಳು ಹೆಚ್ಚಿನ ವಿವರಗಳು ಸ್ಪಷ್ಟವಾಗಲಿದ್ದು, ನಂತರ ಎಲ್ಲಿ ಹೆಚ್ಚು ಗಮನಹರಿಸಬೇಕೆಂದು ನಾವು ನಿರ್ಧರಿಸಲಿದ್ದೇವೆ. ಆಶ್ರಯ ತಾಣಗಳು ಮತ್ತು ಸುರಕ್ಷಿತ ಕಟ್ಟಡಗಳನ್ನು  ಗುರುತಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಸುರೇಶ್ ಮಹಾಪಾತ್ರ ಹೇಳಿದ್ದಾರೆ.

ಅಂತೆಯೇ ರಾಜ್ಯಕ್ಕೆ ಚಂಡಮಾರುತ ಯಾಸ್ ಬರುವ ಮುನ್ನವೇ ಮೀನುಗಾರಿಕಾ ದೋಣಿಗಳು ಮತ್ತು ಹಡಗುಗಳು ತೀರಕ್ಕೆ ಬರಲು ಎರಡು ಭಾರತೀಯ ಕೋಸ್ಟ್ ಗಾರ್ಡ್ ವಿಮಾನಗಳು ಮತ್ತು ಹಡಗುಗಳು ಸಮುದ್ರದಲ್ಲಿ ಗಸ್ತು ತಿರುಗುತ್ತಿವೆ ಎಂದು ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಕೆ. ಜೋನಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT