ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2,57,299 ಹೊಸ ಪ್ರಕರಣ ದಾಖಲು, 4,194 ಮಂದಿ ಸಾವು

ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,57,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ ಇದುವರೆಗೆ 2,62,89,290ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,194 ಸೋಂಕಿತರು ಮೃತಪಟ್ಟಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  ದೇಶದಲ್ಲಿ 2,95,525ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,57,630 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,30,70,365ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,66,285 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,64,84,155ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್