ದೇಶ

ಗಂಗಾ ನದಿಯಲ್ಲಿ ಮೃತದೇಹಗಳು ತೇಲುವುದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ: ರಾಹುಲ್ ಗಾಂಧಿ

Nagaraja AB

ನವದೆಹಲಿ: ಗಂಗಾ ನದಿಯಲ್ಲಿ ಮೃತದೇಹಗಳು ತೇಲುವುದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ, ಅದು ಸಾಮೂಹಿಕ ಜವಾಬ್ದಾರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. 

ಗಂಗಾ ನದಿಯುದ್ದಕ್ಕೂ ತಮ್ಮ ರಕ್ತಸಂಬಂಧದವರನ್ನು ಕಳೆದುಕೊಂಡವರ ನೋವನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಅದು ಅವರ ತಪ್ಪಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮೃತದೇಹಗಳ ಫೋಟೋಗಳನ್ನು ಶೇರ್ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇಡೀ ದೇಶ ಹಾಗೂ ವಿಶ್ವವೇ ಇಂತಹ ದು:ಖದ
ಫೋಟೋಗಳನ್ನು ನೋಡುತ್ತಿದೆ. ಆದರೆ, ಗಂಗಾ ನದಿಯುದ್ದಕ್ಕೂ ತಮ್ಮ ರಕ್ತಸಂಬಂಧದವರನ್ನು ಬಲವಂತದಿಂದ ಬಿಟ್ಟುಹೋದವರ ನೋವನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಅದು ಅವರ ತಪ್ಪಲ್ಲ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದು ಸಾಮೂಹಿಕ ಜವಾಬ್ದಾರಿಯಲ್ಲ, ಆದರೆ, ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಇತ್ತೀಚಿಗೆ ಗಂಗಾ ನದಿಯಲ್ಲಿ ಅಪಾರ ಸಂಖ್ಯೆಯಲ್ಲಿ ಕೋವಿಡ್-19 ಶಂಕಿತ ಮೃತದೇಹಗಳು ತೇಲುವ ಸ್ಥಿತಿ ಕಂಡುಬಂದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸುತ್ತಾ ಬಂದಿದೆ.

SCROLL FOR NEXT