ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 2.40 ಲಕ್ಷ ಹೊಸ ಕೇಸ್ ಪತ್ತೆ, 3,741 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಕೊಂಚ ತಗ್ಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,40,842 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಕೊಂಚ ತಗ್ಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,40,842 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 2,40,842 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,99,266ಕ್ಕೆ ತಲುಪಿದೆ. 

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,05,399ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,55,102 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,34,25,467ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ನಿನ್ನೆ ಒಂದೇ 21,23,782 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ 32,86,07,937 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 19,50,04,184 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel