ನೌಕಪಡೆ 
ದೇಶ

ಯಾಸ್ ಚಂಡಮಾರುತ: ಒಡಿಶಾ ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ, ನಾಲ್ಕು ನೌಕೆಗಳಿಂದ ಸರ್ವ ಸನ್ನದ್ಧ ಸಿದ್ಧತೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.

ಇದೇ ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದ್ದು ಮುಂಜಾಗ್ರತಾ ಕ್ರಮವಾಗಿ ಒಡಿಶಾ ಕರಾವಳಿ ತೀರದಲ್ಲಿ ನಾಲ್ಕು ನೌಕೆಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.  ಐಎನ್ಎಸ್ ದೇಗಾ ಮತ್ತು ಐಎನ್ಎಸ್ ರಾಜಾಲಿ ಸೇರಿದಂತೆ ಒಟ್ಟು ನಾಲ್ಕು ನೌಕೆಗಳನ್ನು ನಿಯೋಜಿಸಲಾಗಿದೆ. 

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಂಟು ತಂಡಗಳನ್ನು ನಿಯೋಜಿಸಲಾಗಿದ್ದು, ನಾಲು ಮುಳುಗ ತಜ್ಞರ ತಂಡಗಳನ್ನು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗಿದೆ. ಕೋಲ್ಕತಾ ಡಾಕ್ ಸಿಸ್ಟಮ್ ಮತ್ತು ಹಲ್ಡಿಯಾ ಡಾಕ್ ಕಾಂಪ್ಲೆಕ್ಸ್‌ನಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಸಿದ್ಧತೆ ನಡೆಸಿದೆ.

ಪೂರ್ವ- ಮಧ್ಯ ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಶನಿವಾರ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಇದು ತೀವ್ರ ಸ್ವರೂಪದ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಅಧಿಕಾರಿಗಳು, 'ಈಗ ನಿರ್ಮಾಣವಾಗಿರುವ ಕಡಿಮೆ ಒತ್ತಡದ ಪ್ರದೇಶದಲ್ಲಿ ಮೇ 23ರ ಬೆಳಗಿನ ಹೊತ್ತಿಗೆ ವಾಯುಭಾರ ಕುಸಿತವಾಗಬಹುದು. ನಂತರ ಅದು ವಾಯವ್ಯ ದಿಕ್ಕಿಗೆ ತೆರಳುವ ಸಾಧ್ಯತೆ ಇದೆ. ಮೇ 24ರಂದು ಅದು ಚಂಡಮಾರುತದ ಸ್ವರೂಪ ಪಡೆದು, ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯಬಹುದು. 26ರ ಬೆಳಿಗ್ಗೆ ಪಶ್ಚಿಮ ಬಂಗಾಳ, ಉತ್ತರ ಒಡಿಶಾ ಮತ್ತು ಬಾಂಗ್ಲಾದೇಶ ಕರಾವಳಿಯಲ್ಲಿ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಸಂಜೆಯ ವೇಳೆಗೆ ಗಾಳಿಯ ವೇಗ ಗಂಟೆಗೆ 110 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತಕ್ಕೆ ಒಳಗಾಗಲಿರುವ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲು ಅನುಕೂಲವಾಗುವಂತೆ, ನೌಕಾಪಡೆಯ ವಿಶಾಖಪಟ್ಟಣದಲ್ಲಿರುವ ವಾಯುನೆಲೆ ಐಎನ್‌ಎಸ್‌ ದೆಗಾ ಹಾಗೂ ಚೆನ್ನೈನ ಐಎನ್‌ಎಸ್‌ ರಜಲಿಯಲ್ಲಿ ವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ ಎಂದು ನೌಕಾಪಡೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂತೆಯೇ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಗಡುವು!

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ತುಮಕೂರು: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ; ಒಂದೇ ಕುಟುಂಬದ 6 ಮಂದಿ ನೀರುಪಾಲು!

"ಋತುಮತಿಯರನ್ನೂ ಬಿಡದ ಕಾಮುಕ": ದೆಹಲಿ ಬಾಬಾ ಚೈತನ್ಯಾನಂದ ಸರಸ್ವತಿ ಕೃತ್ಯಕ್ಕೆ ಮಹಿಳಾ ಸಹಚರರಿಂದ ಸಾಥ್; "ಕಾರಣ ಹೇಳಬೇಡಿ" ಎಂದು ಬೈಗುಳ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

SCROLL FOR NEXT