ದೇಶ

ಕಪ್ಪು ಶಿಲೀಂದ್ರ ಚಿಕಿತ್ಸೆಗಾಗಿ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ 10 ಸಾವಿರ ವಯಲ್ಸ್: ಸದಾನಂದಗೌಡ

Nagaraja AB

ನವದೆಹಲಿ: ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಸೋಮವಾರ ಮತ್ತೆ 19,420 ವಯಲ್ಸ್ ಲಿಫೋಸೊಮಾಲ್ ಎಂಫೋಟೆರಿಸೋನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.

ಈ ಪೈಕಿ ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ. ಆಮದಿನ ಜೊತೆಗೆ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು,
ಇದರ ಹಂಚಿತೆ ನಿರಂತರವಾಗಿ ನಡೆಯಲಿದೆ ಎಂದು ಸದಾನಂದಗೌಡ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ.

ಆಮದಿನ ಜೊತೆಗೇ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

SCROLL FOR NEXT