ದೇಶ

ಕೋವಿಡ್-19: ದೇಶಾದ್ಯಂತ ಒಂದೇ ದಿನ 2.22 ಲಕ್ಷ ಹೊಸ ಸೋಂಕು ಪ್ರಕರಣ; 4,454 ಮಂದಿ ಸಾವು!

Manjula VN

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.22 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,454 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,22,315 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,454 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,02,544 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,37,28,011 ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಕುಸಿತವಾಗುತ್ತಿದ್ದು, ಪ್ರಸ್ತುತ ದೇಶದಲ್ಲಿ 27,20,716   ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 19,28,127 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 33,05,36,064ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 19,60,51,962 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

SCROLL FOR NEXT