ಟ್ವಿಟರ್ 
ದೇಶ

'ಕೋವಿಡ್ ಟೂಲ್ ಕಿಟ್' ತನಿಖೆ: ದೆಹಲಿ, ಗುರಗಾಂವ್ ನ ಟ್ವಿಟರ್ ಕಚೇರಿಗಳ ಮೇಲೆ ದೆಹಲಿ ಪೊಲೀಸ್ ದಾಳಿ

ಕೋವಿಡ್ ಟೂಲ್ ಕಿಟ್ ಆರೋಪದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಹಾಗೂ ಗುರಗಾಂವ್ ನ ಟ್ವಿಟರ್ ಕಟೇರಿಗಳ ಮೇಲೆ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ  ಸೋಮವಾರ ಸಂಜೆ ದಾಳಿ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ಕೋವಿಡ್ ಟೂಲ್ ಕಿಟ್ ಆರೋಪದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಹಾಗೂ ಗುರಗಾಂವ್ ನ ಟ್ವಿಟರ್ ಕಟೇರಿಗಳ ಮೇಲೆ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ  ಸೋಮವಾರ ಸಂಜೆ ದಾಳಿ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಲಾಡೊ ಸರೈ ಮತ್ತು ರಾಷ್ಟ್ರ ರಾಜಧಾನಿಯ ಹೊರಹೊಲಯ ಗುರಗಾಂವ್ ನಲ್ಲಿ ಟ್ವಿಟ್ವಿರ್ ಇಂಡಿಯಾ ಕಟೇರಿಗಳ ಮೇಲೆ
ವಿಶೇಷ ಘಟಕದ ಎರಡು ತಂಡಗಳು ದಾಳಿ ನಡೆಸಿವೆ. ಟೂಲ್ ಕಿಟ್ ವಿಚಾರದ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್-19 ಟೂಲ್ ಕಿಟ್  ಆರೋಪದ ತನಿಖೆಗೆ ಸಂಬಂಧಿಸಿದ ವಿಚಾರಣೆಗಾಗಿ ಟ್ವಿಟರ್ ಗೆ ವಿಶೇಷ ಘಟಕದಿಂದ ನೋಟಿಸ್ ಕಳುಹಿಸಲಾಗಿತ್ತು. ಬಿಜೆಪಿ ಮುಖಂಡ ಸಂಬೀತ್ ಪಾತ್ರ ತಿರುಚಿರುವ ಟ್ವೀಟ್ ಬಗ್ಗೆ ಸ್ಪಷ್ಟನೆ ನೀಡುವಂತೆ ಮೈಕ್ರೋಬ್ಲಾಗಿಂಗ್ ಸೈಟ್ ಗೆ ಕೇಳಲಾಗಿತ್ತು ಎಂದು ಅಧಿಕಾರಿ ಸೋಮವಾರ ಹೇಳಿದ್ದಾರೆ.

ಪೊಲೀಸರಿಗೆ ಗೊತ್ತಿಲ್ಲದ ಕೆಲವೊಂದು ಮಾಹಿತಿಯನ್ನು ಟ್ವಿಟರ್ ಹೊಂದಿದೆ. ಈ ಮಾಹಿತಿ ತನಿಖೆಗೆ ಪ್ರುಸ್ತುತವಾಗಿದೆ ಎಂದು ದೆಹಲಿ
ಪೊಲೀಸ್ ಪಿಆರ್ ಒ ಚಿನ್ಮಾಯಿ ಬಿಸ್ವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!