ದೇಶ

ರಾಜ್ಯಗಳ ಬಳಿ ಇನ್ನೂ 1.77 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದೆ: ಕೇಂದ್ರ ಸರ್ಕಾರ

Srinivasamurthy VN

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.77 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ಇನ್ನೂ 1ಲಕ್ಷ ಡೋಸ್ ಲಸಿಕೆ ಸರಬರಾಜು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಲಸಿಕೆ ಹಂಚಿಕೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ, ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದಡಿಯಲ್ಲಿ ಈ ವರೆಗೂ 22 ಕೋಟಿ ಡೋಸ್ ಗೂ ಹೆಚ್ಚು ಲಸಿಕೆಗಳನ್ನು (22,00,59,880) ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಪ್ರಸ್ತುತ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ಇನ್ನೂ 1 ಲಕ್ಷ ಡೋಸ್ ಲಸಿಕೆ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದೆ.

ಈ 22 ಕೋಟಿ ಡೋಸ್ ಲಸಿಗೆಳ ಪೈಕಿ ವ್ಯರ್ಥವಾದ ಲಸಿಕೆಗಳನ್ನು ಸೇರಿಸಿ 20,13,74,636ಡೋಸ್ ಲಸಿಕೆಗಳನ್ನು ಬಳಕೆ ಮಾಡಲಾಗಿದ್ದು, ಇನ್ನು 1.77 ಕೋಟಿ (1,77,52,594) ಡೋಸ್ ಲಸಿಕೆಗಳ ದಾಸ್ತಾನಿದೆ. ಹೆಚ್ಚುವರಿ 1 ಲಕ್ಷ ಡೋಸ್ ಲಸಿಕೆಗಳನ್ನು ಮೂರು ದಿನಗಳಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದೆ. 

ಕೊರೋನಾ ಸೋಂಕು ನಿಯಂತ್ರಣದಲ್ಲಿ ಲಸಿಕೆ ಪಡೆಯುವಿಕೆ ಅತ್ಯಂತ ಪ್ರಮುಖವಾಗಿದೆ. ಲಸಿಕೆ ನೀಡಿಕೆ ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಕೇಂದ್ರದ ಸಮಗ್ರ ಕಾರ್ಯತಂತ್ರದ ಅವಿಭಾಜ್ಯ ಸ್ತಂಭವಾಗಿದೆ. ಪರೀಕ್ಷೆ, ಸೋಂಕಿತರ ಪತ್ತ, ಚಿಕಿತ್ಸೆ ಮತ್ತು ಕೋವಿಡ್-ಸೂಕ್ತವಾದ ನಡವಳಿಕೆಗಳಿಂದ ಸೋಂಕು ನಿಯಂತ್ರಿಸಬಹುದು ಎಂದು ಸಚಿವಾಲಯವು ಒತ್ತಿಹೇಳಿದೆ.

SCROLL FOR NEXT