ಟ್ವಿಟರ್ ಲೊಗೊ 
ದೇಶ

'ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ನಿಯಮಗಳನ್ನು ನಿರ್ದೇಶಿಸುವ ಪ್ರಯತ್ನ': ಟ್ವಿಟರ್ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಖಂಡನೆ

'ತಿರುಚಿದ ಮೀಡಿಯಾ' ಟ್ಯಾಗ್ ಗಳ ವಿಚಾರದಲ್ಲಿ ಪೊಲೀಸರಿಂದ ಬೆದರಿಕೆ ಹಾಕಲಾಗಿದೆ ಎಂದು ಟ್ವಿಟರ್ ಹೇಳಿದ ನಂತರ ಮೈಕ್ರೊಬ್ಲಾಗಿಂಗ್ ವೇದಿಕೆ ನೀಡಿರುವ ಹೇಳಿಕೆ ನಿರಾಧಾರ, ತಪ್ಪು ಮತ್ತು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಖಂಡಿಸಿದೆ.

ನವದೆಹಲಿ: 'ತಿರುಚಿದ ಮೀಡಿಯಾ' ಟ್ಯಾಗ್ ಗಳ ವಿಚಾರದಲ್ಲಿ ಪೊಲೀಸರಿಂದ ಬೆದರಿಕೆ ಹಾಕಲಾಗಿದೆ ಎಂದು ಟ್ವಿಟರ್ ಹೇಳಿದ ನಂತರ ಮೈಕ್ರೊಬ್ಲಾಗಿಂಗ್ ವೇದಿಕೆ ನೀಡಿರುವ ಹೇಳಿಕೆ ನಿರಾಧಾರ, ತಪ್ಪು ಮತ್ತು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಖಂಡಿಸಿದೆ.

ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾ ಕಂಪನಿಗಳ ಪ್ರತಿನಿಧಿಗಳು, ದೇಶದಲ್ಲಿ ಯಾವುದೇ ಸುರಕ್ಷಿತವಾಗಿ ಇರಲಿದ್ದಾರೆ. ಅವರ ವೈಯಕ್ತಿಕ ಸುರಕ್ಷತೆ ಮತ್ತು ಭದ್ರತೆಗೆ ಯಾವುದೇ ಬೆದರಿಕೆ ಇಲ್ಲ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರತಿಪಾದಿಸಿದೆ.

ಟ್ವಿಟರ್ ಹೇಳಿಕೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ  ನಿಯಮಗಳನ್ನು ನಿರ್ದೇಶಿಸುವ ಪ್ರಯತ್ನವಾಗಿದೆ. ಟ್ವಿಟರ್ ತನ್ನ ಕಾರ್ಯಗಳು ಮತ್ತು  ಉದ್ದೇಶಪೂರ್ವಕವಾಗಿ ಕೆಣಕುವ  ಮೂಲಕ ಭಾರತದ ಕಾನೂನು ವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ಹೇಳಿದೆ.

ಟ್ವಿಟರ್ ನೀಡಿರುವ ದುರಾದೃಷ್ಟಕರ  ಹೇಳಿಕೆಯನ್ನು ಸರ್ಕಾರ ಖಂಡಿಸಿದು, ಅದು ಸಂಪೂರ್ಣವಾಗಿ ನಿರಾಧಾರ, ಸುಳ್ಳು ಮತ್ತು ತಮ್ಮ ಸ್ವಂತ ದಡ್ಡತನವನ್ನು ಮರೆ ಮಾಚಲು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಮಾಹಿತಿ ಸಚಿವಾಲಯ ತಿಳಿಸಿದೆ.

ಇದಕ್ಕೂ ಮುನ್ನ, ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇರುವ ಸಂಭಾವ್ಯ ಆಪಾಯ ಮತ್ತು ಪೊಲೀಸರ ಮೂಲಕ ಬೆದರಿಸುವ ತಂತ್ರದ ಬಗ್ಗೆ ಟ್ವಿಟರ್ ಆತಂತ ವ್ಯಕ್ತಪಡಿಸಿತ್ತು. ತನ್ನ ಕಚೇರಿಗೆ ಪೊಲೀಸರ ಭೇಟಿ ಪ್ರಸ್ತಾಪಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ತನ್ನ ಸಂಸ್ಥೆಯ ನೌಕರರ ಭದ್ರತೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ